Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬ ವ್ಯಕ್ತಿಯ ಒಳಗೊಬ್ಬ ಕಲಾವಿದನಿರ್ತಾನೆ” – ಕಾಸರಗೋಡು ಚಿನ್ನಾ

    June 2, 2025

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ
    Literature

    ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ

    February 5, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸ್ಥಾಪಕ ಸಂಚಾಲಕ ಡಾ. ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭವು ದಿನಾಂಕ 02 ಫೆಬ್ರವರಿ 2025ರಂದು ನೆರವೇರಿತು. ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು, ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು, ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.

    ಕೇಂದ್ರದ ಪ್ರಧಾನ ಸಮಿತಿ ಕಚೇರಿ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಇವರು ಕನ್ನಡ ಧ್ವಜವನ್ನು ಹಸ್ತಾಂತರಿಸಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಲು ವಿವಿಧ ಕನ್ನಡ ಸಂಘಟನೆಗಳು ಕೈಜೋಡಿಸಬೇಕೆಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ, ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು. ಡಾ. ವಾಮನ ರಾವ್ ಬೇಕಲ್ ಸ್ವಾಗತಿಸಿ, ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿ, ನರಸಿಂಹ ಭಟ್ ಏತಡ್ಕ ವಂದಿಸಿದರು.

    Literature Music
    Share. Facebook Twitter Pinterest LinkedIn Tumblr WhatsApp Email
    Previous Articleಕಲ್ಲಮದ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಪ್ರಾಂಗಣದಲ್ಲಿ ತಾಳಮದ್ದಳೆ
    Next Article ‘ನಿರ್ದಿಗಂತ ಉತ್ಸವ 2025’ದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲು ಆಹ್ವಾನ
    roovari

    Add Comment Cancel Reply


    Related Posts

    ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿಯಿಂದ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರ

    June 2, 2025

    ‘ಬಾಳ ಹಾದಿಯಲಿ ಬೆಳ್ಳಿ ಚುಕ್ಕಿ’ ಕಾದಂಬರಿಗೆ ಇಂಡಿಯನ್ ಐಕಾನ್ ಅವಾರ್ಡ್

    June 2, 2025

    ಕ.ಸಾ.ಪ.ದಿಂದ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ‘ಎದೆಯ ಹಣತೆ’ ಕೃತಿ ಕುರಿತು ಚರ್ಚೆ

    June 2, 2025

    ಕಾಸರಗೋಡಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಜನ್ಮದಿನೋತ್ಸವ ಸಂಭ್ರಮ | ಜೂನ್ 08

    June 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.