ಮಂಗಳೂರು : ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಇವರು ಕಳೆದ 9 ವರ್ಷಗಳಿಂದ ಕದ್ರಿ ದೇವಸ್ಥಾನದ ಅಂಗಣದಲ್ಲಿ ಕಟೀಲು ಮೇಳದ ಸೇವೆ ಬಯಲಾಟ ನಡೆಸಿಕೊಂಡು ಬರುತ್ತಿರುವ ಕದ್ರಿ ಯಕ್ಷ ಬಳಗವು ಕೊಡಮಾಡುವ ‘ಕದ್ರಿ ವಿಷ್ಣು ಪ್ರಶಸ್ತಿ’ಯನ್ನು ದಿನಾಂಕ 17 ನವೆಂಬರ್ 2025ರಂದು ಪ್ರದಾನಿಸಿದರು. 27 ವರ್ಷಗಳ ಶ್ರೀ ಕಟೀಲು ಮೇಳದ ತಿರುಗಾಟದಲ್ಲಿ 19 ವರ್ಷ ಒಂದೇ ಒಂದು ರಜೆ ಪಡೆಯದೆ ದಾಖಲೆ ಮಾಡಿರುವ ಅಪೂರ್ವ ಕಲಾರಾಧಕ, ತೆಂಕು ತಿಟ್ಟಿನ ಪ್ರಾತಿನಿಧಿಕ ಯಕ್ಷಗಾನ ರಾಜ ಹಾಸ್ಯಗಾರ ರವಿಶಂಕರ್ ವಳಕುಂಜ ಇವರಿಗೆ ‘ಕದ್ರಿ ವಿಷ್ಣು ಪ್ರಶಸ್ತಿ-2025’ ನೀಡಿ ಗೌರವಿಸಲಾಯಿತು.
ಅಭಿನಂದನಾ ಭಾಷಣ ಮಾಡಿದ ಯಕ್ಷ ಬಳಗದ ಅಧ್ಯಕ್ಷ ಕದ್ರಿ ನವನೀತ ಶೆಟ್ಟಿಯವರು “ರವಿಶಂಕರ್ ಇವರು, ಹಾಸ್ಯ ರತ್ನ ನಯನ ಕುಮಾರ್, ಉಂಡೆಮನೆ ಶ್ರೀಕೃಷ್ಣ ಭಟ್ ಇವರಿಂದ ಯಕ್ಷ ಶಿಕ್ಷಣ ಪಡೆದು ಕಟೀಲು ಮೇಳಕ್ಕೆ ಸೇರಿದ ಮೂರು ವರ್ಷದಲ್ಲೇ ಪ್ರಧಾನ ಹಾಸ್ಯಗಾರರಾಗಿ ಮುನ್ನಡೆದವರು” ಎಂದು ಹೇಳಿದರು.
ಕದ್ರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ ಇವರು ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ವೈದ್ಯ ಡಾ. ಜಯಶಂಕರ್ ಮಾರ್ಲ. ಲೀಲಾಕ್ಷ ಬಿ. ಕರ್ಕೇರ, ಬೊಂಡಾಲ ಸಚ್ಚಿದಾನಂದ ಶೆಟ್ಟಿ, ಸಿ.ಎಸ್. ಭಂಡಾರಿ. ರವೀಂದ್ರನಾಥ್ ಶೆಟ್ಟಿ, ರವೀಂದ್ರ ಶೇಟ್, ಸುಣ್ಣಂಬಳ ವಿಶ್ವೇಶ್ವರ ಭಟ್, ಜಯಶೀಲ ಅಡ್ಯಂತಾಯ, ಮೂಲ್ಕಿ ಕರುಣಾಕರ ಶೆಟ್ಟಿ, ದಿವಾಕರ ಶೆಟ್ಟಿ ಪರಾರಿ ಗುತ್ತು ಭಾಗವಹಿಸಿದರು.
ಪ್ರದೀಪ ಕುಮಾರ ಕಲ್ಕೂರ, ತಾರಾನಾಥ ಶೆಟ್ಟಿ ಬೋಳಾರ, ಶಿವ ಪ್ರಸಾದ್ ಪ್ರಭು, ಎಲ್ಲೂರು ರಾಮಚಂದ್ರ ಭಟ್, ಸುಧಾಕರ್ ಶೆಟ್ಟಿ ದೋಣಿಂಜೆ ಗುತ್ತು, ಕೃಷ್ಣ ಶೆಟ್ಟಿ ತಾರೆಮಾರ್, ಹರೀಶ್ ಕುಮಾರ್, ನಿವೇದಿತಾ ಎನ್. ಶೆಟ್ಟಿ, ಬೆಟ್ಟಂಪಾಡಿ ಸುಂದರ ಶೆಟ್ಟಿ, ಮಧುಸೂದನ ಅಲೆವೂರಾಯ ಉಪಸ್ಥಿತರಿದ್ದರು. ಪ್ರದೀಪ್ ಆಳ್ವ ಕದ್ರಿ ಸನ್ಮಾನ ಪತ್ರ ವಾಚಿಸಿದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ಕಾರ್ಯಕ್ರಮ ನಿರೂಪಿಸಿದರು. ಸುಧಾಕರ ರಾವ್ ಪೇಜಾವರ ವಂದಿಸಿದರು. ಕಟೀಲು ಮೇಳದವರಿಂದ ‘ದಶಾವತಾರ’ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

