ಮಡಿಕೇರಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಕ್ಕಳು ಮತ್ತು ಯುವಜನರ ಕಲಾಪ್ರತಿಭೆ ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ‘ಕಲಾ ಪ್ರತಿಭೋತ್ಸವ’ ರೂಪಿಸಿದೆ. ಈ ಉತ್ಸವವನ್ನು ದಿನಾಂಕ 09 ಮತ್ತು 10 ಅಕ್ಟೋಬರ್ 2025ರಂದು ಮಡಿಕೇರಿಯ ಗಾಂಧಿ ಭವನದಲ್ಲಿ ನಡೆಸಲಾಗುವುದು.
ಬಾಲಪ್ರತಿಭೆ/ಕಿಶೋರ ಪ್ರತಿಭೆ/ಯುವಪ್ರತಿಭೆ ಎಂಬ ಶೀರ್ಷಿಕೆಯಡಿ ಮೂರು ವಿಭಾಗಗಳಲ್ಲಿ ಸ್ಪರ್ಧಾ ರೂಪದಲ್ಲಿ ಏರ್ಪಡಿಸಲಾಗುವುದು. ಈ ಸ್ಪರ್ಧೆಗಳನ್ನು ದಿನಾಂಕ 09 ಅಕ್ಟೋಬರ್ 2025ರಂದು ಬಾಲಪ್ರತಿಭೆ/ ಕಿಶೋರ ಪ್ರತಿಭೆ ಹಾಗೂ ದಿನಾಂಕ 10 ಅಕ್ಟೋಬರ್ 2025ರಂದು ಯುವ ಪ್ರತಿಭೆ/ ಸಮೂಹ ಸ್ಪರ್ಧೆಗಳಿಗೆ ಸ್ಪರ್ಧಾರೂಪದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನವನ್ನು ಪಡೆದವರಲ್ಲಿ ಪ್ರಥಮ ಸ್ಥಾನ ಪಡೆದವರನ್ನು ವಲಯ ಮಟ್ಟದ ಸ್ಪರ್ಧೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುವುದು.
ಅರ್ಹತೆ : ಬಾಲ ಪ್ರತಿಭೆ : ಬಾಲ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 8 ವರ್ಷ ತುಂಬಿರಬೇಕು ಹಾಗೂ 14 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯೂ ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆಯಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯ್ತಿ/ ನಗರಸಭೆ/ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿರಬೇಕು.
ಕಿಶೋರ ಪ್ರತಿಭೆ : ಕಿಶೋರ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 14 ವರ್ಷವಾಗಿರಬೇಕು, 18 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯ ವಯೋಮಿತಿಯ ದೃಢೀಕರಣಕ್ಕಾಗಿ ಶಾಲೆ/ಕಾಲೇಜಿನಿಂದ ಪಡೆದು ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯ್ತಿ/ ನಗರಸಭೆ/ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದ್ದು ಸಲ್ಲಿಸಬೇಕು.
ಯುವಪ್ರತಿಭೆ : ಯುವ ಪ್ರತಿಭೆಯ ವಿಭಾಗದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿ ಹಾಗೂ 30 ವರ್ಷಕ್ಕಿಂತ ಕಡಿಮೆಯಿರಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಭ್ಯರ್ಥಿಯು ವಯೋಮಿತಿಯ ದೃಢೀಕರಣಕ್ಕಾಗಿ ಕಾಲೇಜಿನಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. ಶಾಲೆಯಿಂದ ಬಂದ ಅಭ್ಯರ್ಥಿಯಲ್ಲದಿದ್ದಲ್ಲಿ ಅವರ ವಯಸ್ಸಿನ ಬಗ್ಗೆ ಪಂಚಾಯ್ತಿ/ನಗರ ಸಭೆ/ಪುರಸಭೆ/ಪಾಲಿಕೆ ಕಚೇರಿಯಿಂದ ದೃಢೀಕರಣ ಪತ್ರ ಪಡೆದು ಸಲ್ಲಿಸಬೇಕು.
ಸಮೂಹ ಸ್ಪರ್ಧೆ : ಸಮೂಹ ಪ್ರಕಾರಗಳಲ್ಲಿ ಭಾಗವಹಿಸುವ ತಂಡದ ಸದಸ್ಯರ ಸಂಖ್ಯೆ ಕನಿಷ್ಠ 10 ಗರಿಷ್ಠ 15 ಜನರನ್ನು ಮೀರಬಾರದು. ಏಕವ್ಯಕ್ತಿಗಳ ಸ್ಪರ್ಧೆಗಳು ಬಾಲ ಪ್ರತಿಭೆ/ ಕಿಶೋರ ಪ್ರತಿಭೆ ವಿಭಾಗದ ಸ್ಪರ್ಧೆಗೆ ಕಲಾಪ್ರಕಾರಗಳು ಹಾಗೂ ನಿಗದಿ ಪಡೆಸಿದ ಸಮಯ ಶಾಸ್ತ್ರೀಯ ನೃತ್ಯ (10 ನಿಮಿಷ), ಸುಗಮ ಸಂಗೀತ (7 ನಿಮಿಷ), ಚಿತ್ರಕಲೆ (120 ನಿಮಿಷ), ಜಾನಪದ ಗೀತೆ (7 ನಿಮಿಷ), ಹಿಂದೂಸ್ತಾನಿ/ ಕರ್ನಾಟಕ ವಾದ್ಯ ಸಂಗೀತ (7 ನಿಮಿಷ), ಹಿಂದೂಸ್ತಾನಿ/ ಕರ್ನಾಟಕ ಶಾಸ್ತ್ರೀಯ ಸಂಗೀತ (7 ನಿಮಿಷ).
ಏಕವ್ಯಕ್ತಿ ಸ್ಪರ್ಧೆಗಳು : ಯುವ ಪ್ರತಿಭೆ ವಿಭಾಗದ ಸ್ಪರ್ಧೆಗೆ ಕಲಾಪ್ರಕಾರಗಳು ಮತ್ತು ನಿಗದಿಪಡಿಸಿದ ಸಮಯ : ‘ನನ್ನ ಮೆಚ್ಚಿನ ಸಾಹಿತಿ’ (ಆಶುಭಾಷಣ : 7 ನಿಮಿಷ), ಶಾಸ್ತ್ರೀಯ ನೃತ್ಯ (10 ನಿಮಿಷ), ಸುಗಮ ಸಂಗೀತ (7 ನಿಮಿಷ), ಹಿಂದೂಸ್ತಾನಿ/ಕರ್ನಾಟಕ ಶಾಸ್ತ್ರೀಯ ಸಂಗೀತ (7 ನಿಮಿಷ), ಚಿತ್ರಕಲೆ (120 ನಿಮಿಷ), ಹಿಂದೂಸ್ತಾನಿ/ ಕರ್ನಾಟಕ ವಾದ್ಯ ಸಂಗೀತ (7 ನಿಮಿಷ) ಹಾಗೂ ಸಮೂಹ ಸ್ಪರ್ಧೆಗಳು: ನಾಟಕ (45 ನಿಮಿಷ) ಜಿಲ್ಲಾ ಮಟ್ಟದಲ್ಲಿ ಪ್ರತಿ ಕಲಾ ಪ್ರಕಾರದಲ್ಲಿ ಆಯ್ಕೆಯಾದ ಬಾಲ ಪ್ರತಿಭೆ / ಕಿಶೋರ ಪ್ರತಿಭೆ/ಯುವ ಪ್ರತಿಭೆ ಹಾಗೂ ನಾಟಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಒಬ್ಬರನ್ನು ಸಂಬಂಧಿತ ವಲಯ ಮಟ್ಟಕ್ಕೆ ಕಳುಹಿಸಿಕೊಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುವುದು. ಈ ಸ್ಪರ್ಧೆಗಳಲ್ಲಿ ಭಾಗಹಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಕಚೇರಿ ವೇಳೆಯಲ್ಲಿ ನೋಂದಾಯಿಸಿಕೊಳ್ಳಲು ಕೋರಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08272-228490ರಲ್ಲಿ ಸಂಪರ್ಕಿಸಬಹುದು.