ಮಂಗಳೂರು : ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿ (ರಿ.) ಪುತ್ತೂರು ಸಂಸ್ಥೆಯ 30ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ‘ಮೂಕಾಂಬಿಕಾ ಮೂವತ್ತರ ಮಾರ್ದನಿ’ ಶೀರ್ಷಿಕೆಯಲ್ಲಿ ಮಂಗಳೂರಿನ ಕಲಾಸೂರ್ಯ ನೃತ್ಯಾಲಯ ಪ್ರಸ್ತುತ ಪಡಿಸುವ ‘ಕಲಾಭವ -02’ ಪ್ರಸ್ತುತಿಯನ್ನು ದಿನಾಂಕ 13 ಸೆಪ್ಟೆಂಬರ್ 2025ರಂದು ಸಂಜೆ 5-30 ಗಂಟೆಗೆ ಮಂಗಳೂರಿನ ಜೈಲ್ ರೋಡ್, ಮೊದಲನೇ ಮಹಡಿ ಸುಬ್ರಹ್ಮಣ್ಯ ಸದನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸುಬ್ರಹ್ಮಣ್ಯ ಸಭಾದ ಅಧ್ಯಕ್ಷರಾದ ಎ.ಪಿ. ಕೃಷ್ಣ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದು, ವಿದ್ವಾನ್ ಬಿ. ದೀಪಕ್ ಕುಮಾರ್ ಪುತ್ತೂರು ಇವರ ಶಿಷ್ಯೆ ಪ್ರಣಮ್ಯ ಪಾಲೆಚ್ಚಾರ್ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.