ಬೆಂಗಳೂರು : ಚಿಣ್ಣರಲೋಕ ಟ್ರಸ್ಟ್(ರಿ.) ಬೆಂಗಳೂರು, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ (ರಿ.) ಕಮತಗಿ, ಶ್ರೀ ಆನಂದ ಲಿಂಗೇಶ್ವರ ಟ್ರಸ್ಟ್ (ರಿ.) ಬೆಂಗಳೂರು, ಭಾರತೀಯ ಸ್ತ್ರೀ ಶಕ್ತಿ ಸಂಘಟನಾ ಟ್ರಸ್ಟ್(ರಿ.) ಬೆಂಗಳೂರು ಜಂಟಿಯಾಗಿ ಆಯೋಜಿಸುವ ಕಲೆ,ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ” ಕಾರ್ಯಕ್ರಮವು ದಿನಾಂಕ 18 ಅಕ್ಟೋಬರ್ 2025ರ ಶನಿವಾರ ಬೆಳಗ್ಗೆ ಘಂಟೆ 10:00ಕ್ಕೆ ಬೆಂಗಳೂರು ಹೆಬ್ಬಾಳದಲ್ಲಿರುವ ಶ್ರೀ ಆನಂದಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ
ಕನ್ನಡ ಕುವರ ರಂಗ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದರಾದ ಬೆಂಗಳೂರಿನ ಶ್ರೀ ಎಂ. ಅಶೋಕ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹೆಬ್ಬಾಳ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶ್ರೀ ಸಿ. ಮುನಿಕೃಷ್ಣ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕವಿಗೋಷ್ಠಿ, ಉಪನ್ಯಾಸ, ಪುಸ್ತಕ ಬಿಡುಗಡೆ, ಕಲಾ ಪ್ರದರ್ಶನ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.