Subscribe to Updates

    Get the latest creative news from FooBar about art, design and business.

    What's Hot

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಗೋವಿಂದ ದಾಸ ಕಾಲೇಜಿನಲ್ಲಿ ‘ಕಲಿಕಾ’ – ಭರತನಾಟ್ಯ ಪ್ರದರ್ಶನ
    Bharathanatya

    ಗೋವಿಂದ ದಾಸ ಕಾಲೇಜಿನಲ್ಲಿ ‘ಕಲಿಕಾ’ – ಭರತನಾಟ್ಯ ಪ್ರದರ್ಶನ

    May 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಗೋವಿಂದದಾಸ ಕಾಲೇಜಿನ ಯಕ್ಷಗಾನ ಮತ್ತು ಲಲಿತಕಲಾ ಸಂಘ ಹಾಗೂ ಕಲಾಬ್ಧಿಯ ಸಹಭಾಗಿತ್ವದಲ್ಲಿ ವಿನೂತನ ಕಾರ್ಯಕ್ರಮವಾದ ‘ಕಲಿಕಾ’-ಭರತನಾಟ್ಯ ಪ್ರದರ್ಶನವು ಗೋವಿಂದ ದಾಸ ಕಾಲೇಜಿನಲ್ಲಿ ದಿನಾಂಕ 29-04-2024ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾರದಾ ನಾಟ್ಯಾಲಯ, ಸುರತ್ಕಲ್‌ನ ಮುಖ್ಯಸ್ಥೆ ವಿದುಷಿ ಭಾರತಿ ಸುರೇಶ್ ಇವರು ಮಾತನಾಡಿ “ಭರತನಾಟ್ಯವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುವ ಕಲೆಯಾಗಿದ್ದು ಸಹಸ್ರಾರು ವರ್ಷಗಳ ಇತಿಹಾಸವನ್ನು ಹೊಂದಿದೆ. ಭರತನಾಟ್ಯದ ಅಭ್ಯಾಸಿಸುವಿಕೆಯಿಂದ ನಮ್ಮ ಸಂಸ್ಕೃತಿಯ ಅರಿವಿನ ಜೊತೆಗೆ ಮಾನಸಿಕ ಮತ್ತು ದೈಹಿಕ ದೃಢತೆಯನ್ನು ಪಡೆಯಲು ಸಾಧ್ಯ” ಎಂದು ನುಡಿದರು.

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಮಾತನಾಡಿ “ಶೈಕ್ಷಣಿಕ ಸಂಸ್ಥೆಗಳು ಶಾಸ್ತ್ರೀಯ ಕಲೆಗಳಿಗೆ ಹೆಚ್ಚಿನ ಬೆಂಬಲ ನೀಡಿ ಯುವ ಕಲಾವಿದರನ್ನು ಬೆಳೆಸಬೇಕಾಗಿದೆ” ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ. ಕೃಷ್ಣಮೂರ್ತಿ ಪಿ. ಮಾತನಾಡಿ “ಗೋವಿಂದದಾಸ ಕಾಲೇಜು ಪಠ್ಯದೊಂದಿಗೆ ವಿದ್ಯಾರ್ಥಿಗಳ ಆಸಕ್ತಿಗನುಸಾರವಾಗಿ ಪಠ್ಯೇತರ ಚುವಟಿಕೆಗಳಲ್ಲೂ ಬೆಳೆಯುವಂತೆ ಪ್ರೋತ್ಸಾಹ ನೀಡುತ್ತಿದೆ. ಅನೇಕ ವಿದ್ಯಾರ್ಥಿಗಳು ಪ್ರಬುದ್ಧ ಕಲಾವಿದರಾಗಿ ರೂಪುಗೊಳ್ಳುತ್ತಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ” ಎಂದರು.

    ಕಾಲೇಜಿನ ವಿದ್ಯಾರ್ಥಿನಿಯರಾದ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಅವರ ಶಿಷ್ಯೆ ಪಲ್ಲವಿ ವಸಂತ್ ಮತ್ತು ವಿದುಷಿ ಅನ್ನಪೂರ್ಣ ರಿತೇಶ್‌ ಅವರ ಶಿಷ್ಯೆ ಹಿತಾ ಉಮೇಶ್‌ ಅವರಿಂದ ಭರತನಾಟ್ಯ ಪ್ರದರ್ಶನವು ನಡೆಯಿತು. ಗೋವಿಂದದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಅಧ್ಯಕ್ಷೆ ಡಾ.ಸಾಯಿಗೀತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ., ಲಲಿತಕಲಾ ಸಂಘದ ಸಂಯೋಜಕರಾದ ಡಾ. ವಿಜಯಲಕ್ಷ್ಮೀ, ಕುಮಾರ ಮಾದರ, ಸಾಹಿತಿ ಬಾಬು ಪಾಂಗಳ, ಶಿಕ್ಷಕ ರಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯೆ ಸುಮಿತ್ರಾ, ಪದ್ಮಪ್ರಿಯ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಅಕ್ಷತಾ ವಿ. ಕಾರ್ಯಕ್ರಮ ನಿರೂಪಿಸಿ, ಲಲತಕಲಾ ಮತ್ತು ಯಕ್ಷಗಾನ ಕೇಂದ್ರದ ತರಬೇತಿದಾರ ವಿನೋದ್‌ ಕುಮಾರ್ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬಾಯಾರಿನಲ್ಲಿ ‘ಸಾಹಿತ್ಯ ಗಾನ ನೃತ್ಯ ವೈಭವ’
    Next Article ಯುಗಾದಿ ಹಬ್ಬದ ಪ್ರಯುಕ್ತ ನಡೆಸಿದ ರಾಜ್ಯಮಟ್ಟದ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟ
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಕೊಲ್ಯದ ನಾಟ್ಯನಿಕೇತನದ ನೃತ್ಯಾಂಗಣದಲ್ಲಿ ಸರಣಿ-ಮಾಲಿಕೆ 16 ‘ನಾಟ್ಯ ಮೋಹನ ನವತ್ಯುತ್ಸಹ’ | ಮೇ 28

    May 27, 2025

    ಶ್ರೀ ಕ್ಷೇತ್ರ ಪಂಚಲಿಂಗದಲ್ಲಿ ಕಿರು ನಾಟಕ, ನೃತ್ಯ ನಮನ ಮತ್ತು ಯಕ್ಷಗಾನ ಪ್ರದರ್ಶನ | ಮೇ 25 ಮತ್ತು 26

    May 24, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.