ಬೆಂಗಳೂರು : ಯಕ್ಷಗಾನದ ಭಾಗವತರಾಗಿ ತಮ್ಮ ಸೇವೆ ಸಲ್ಲಿಸುತ್ತಿರುವ ಹಾಲಾಡಿ ರಾಘವೇಂದ್ರ ಮಯ್ಯ ಇವರು 2025ರ ಸಾಲಿನ ಕಾಳಿಂಗ ನಾವಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಯಕ್ಷಗಾನ, ನಾಟಕವಲ್ಲದೆ ಹಲವಾರು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೆಂಗಳೂರಿನ ಕಲಾಕದಂಬ ಆರ್ಟ್ ಸೆಂಟರ್ ಸಂಸ್ಥೆಯು ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕರಾವಳಿಯ ಗಾನಕೋಗಿಲೆ ಖ್ಯಾತಿಯ ಭಾಗವತ ಕಾಳಿಂಗ ನಾವಡರ ನೆನಪಿನಲ್ಲಿ ಪ್ರತಿ ವರ್ಷ ಯಕ್ಷಗಾನ ಕ್ಷೇತ್ರದಲ್ಲಿನ ಪ್ರತಿಭಾನ್ವಿತರೋರ್ವರಿಗೆ ಕಾಳಿಂಗ ನಾವಡ ಪ್ರಶಸ್ತಿಯನ್ನು ನೀಡುತಿದೆ.
ಪ್ರಶಸ್ತಿಯನ್ನು ದಿನಾಂಕ 12 ಅಕ್ಟೋಬರ್ 2025 ರಂದು ಸಂಜೆ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಇಪ್ಪತೈದು ಸಾವಿರ ನಗದು, ಬೆಳ್ಳಿ ಫಲಕ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ಒಳಗೊಂಡಿರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಬೆಂಗಳೂರಿನ ಬಸವನಗುಡಿಯ ವಾಡಿಯಾ ಸಭಾಂಗಣದಲ್ಲಿ ‘ಅನುಗ್ರಹ’ | ಜುಲೈ 06