ಮಂಗಳೂರು : ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಚಟುವಟಿಕೆ ಕೋಶದ ಆಶ್ರಯದಲ್ಲಿ ‘ಕಲೋತ್ಸವ 2023’ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯು ಕಾಲೇಜಿನ ಎಲ್.ಎಫ್. ರಸ್ಕೀನ್ಹಾ ಸಭಾಂಗಣದಲ್ಲಿ ದಿನಾಂಕ 18-08-2023ರಂದು ನಡೆಯಿತು.
ಮುಖ್ಯ ಅತಿಥಿಯಾಗಿದ್ದ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ, ಭರತನಾಟ್ಯ ಕಲಾವಿದ ಮೋಹನ್ ರಾಜ್ ಮಾತನಾಡಿ, ಕಲಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರೋತ್ಸಾಹಿಸಿದರು. ತಾವು ಕಲಾರಂಗದಲ್ಲಿ ನಡೆದು ಬಂದ ತಮ್ಮ ಸಾಧನೆಗಳನ್ನು ತೆರೆದಿಟ್ಟರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ. ಮಾತನಾಡಿ, “ಸಂತ ಅಲೋಶಿಯಸ್ ಕಾಲೇಜು ಮಕ್ಕಳ ಕಲಾಚಟುವಟಿಕೆಗಳಿಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು” ಎಂದರು.
ಕಾಲೇಜಿನ ಕುಲಸಚಿವ, ಡಾ. ಆಲ್ವಿನ್ ಡೇಸಾ, ವಿದ್ಯಾರ್ಥಿ ಸಂಘದ ನಾಯಕ ಕ್ರಿಸ್ಟನ್ ಜೋಶುವಾ ಮಿನೇಜಸ್ ಉಪಸ್ಥಿತರಿದ್ದರು. ಲೆನ್ವಿನ್ ಕಾರ್ಲ್ ನಿರೂಪಿಸಿದರು. ವಿದ್ಯಾರ್ಥಿ ಚಟುವಟಿಕೆ ಕೋಶದ ಡೀನ್ ಡಾ. ಈಶ್ವರ ಭಟ್ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಕಲೋತ್ಸವ 2023ರ ಬಗ್ಗೆ ವಿವರಿಸಿದರು. ಕಾಲೇಜಿನ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಚಟುವಟಿಕೆ ಕಾರ್ಯದರ್ಶಿ ದಿಯಾ ಪದವ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಸಂಯೋಜಕಿ ಕವಿತಾ ವಂದಿಸಿದರು.