ಮಂಗಳೂರು : ನಾಟ್ಯಾಲಯ ಉರ್ವ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸುವ ಕೀರ್ತಿಶೇಷ ಕರ್ನಾಟಕ ಕಲಾಶ್ರೀ ವಿದುಷಿ ಕಮಲ ಭಟ್ ಸಂಸ್ಮರಣೆಯೊಂದಿಗೆ ‘ಕಮಲಾಂಜಲಿ’ ನೃತ್ಯ ಕಾರ್ಯಕ್ರಮವನ್ನು ದಿನಾಂಕ 13 ಆಗಸ್ಟ್ 2025ರಂದು ಸಂಜೆ 5-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.
ಶ್ರೀ ಕ್ಷೇತ್ರ ಕಟೀಲು ವೇದಮೂರ್ತಿ ಶ್ರೀಹರಿನಾರಾಯಣ ದಾಸ ಅಸ್ರಣ್ಣ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ಗುರು ಶ್ರೀ ಉಳ್ಳಾಲ್ ಮೋಹನ್ ಕುಮಾರ್ ಇವರಿಗೆ ಗೌರವಾಭಿನಂದನೆ ನಡೆಯಲಿದ್ದು, ಸಂಸ್ಕಾರ ಭಾರತಿ ಅಧ್ಯಕ್ಷರಾದ ಪುರುಷೋತ್ತಮ ಭಂಡಾರಿ ಮತ್ತು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ ಕುಮಾರ್ ಕಲ್ಕೂರ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಚನೆ’ ಭರತನಾಟ್ಯ ಪ್ರಸ್ತುತಗೊಳ್ಳಲಿದೆ.