ಬೆಂಗಳೂರು : ಬಿ. ಎಂ. ಶ್ರೀ. ಪ್ರತಿಷ್ಠಾನ (ರಿ.), ಎಂ. ವಿ. ಸೀ. ಸ್ನಾತಕೋತ್ತರ ಸಂಶೋಧನ ಕೇಂದ್ರ ಆಯೋಜಿಸುವ ‘ಕಂಬತ್ತಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ 2025’ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 06 ಜುಲೈ 2025ರ ಭಾನುವಾರ ಬೆಳಗ್ಗೆ ಘಂಟೆ 10.30ಕ್ಕೆ ಬೆಂಗಳೂರಿನ ಎಂ. ವಿ. ಸೀ. ಸಭಾಂಗಣದ ಬಿ. ಎಂ.ಶ್ರೀ. ಕಲಾಭವನದಲ್ಲಿ ನಡೆಯಲಿದೆ.
ಬಿ. ಎಂ. ಶ್ರೀ. ಪ್ರತಿಷ್ಠಾನ ಇದರ ಅಧ್ಯಕ್ಷರಾದ ಡಾ. ಬೈರಮಂಗಲ ರಾಮೇಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಪದ್ಮರಾಜ ಎನ್. ದೇಸಾಯಿ ಇವರು ಜೈನ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಚಾರಕರು ಹಾಗೂ ಕರ್ನಾಟಕ ಜೈನ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಶ್ರೀ ಎಸ್. ಜಿತೇಂದ್ರ ಕುಮಾರ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿಗಳು ಹಾಗೂ ಅಂತಾರಾಷ್ಟ್ರೀಯ ಖ್ಯಾತಿಯ ಸಂಶೋಧಕರಾದ ನಾಡೋಜ ಡಾ. ಹಂಪ ನಾಗರಾಜಯ್ಯ ಭಾಗವಹಿಸಲಿದ್ದು, ಖ್ಯಾತ ಲೇಖಕಿ ಹಾಗೂ ಪ್ರಾಧ್ಯಾಪಕಿಯಾದ ಡಾ. ಪದ್ಮಿನಿ ನಾಗರಾಜು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಸಮಾರಂಭದಲ್ಲಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಕಾರ್ಯಪಾಲಕ ಅಭಿಯಂತರರಾದ ಶ್ರೀ ಕೆ. ಜೆ. ಪಾಶ್ವನಾಥ ಉಪಸ್ಥಿತರಿರುವರು.