ದಿನಾಂಕ : ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಹಯೋಗದಲ್ಲಿ ರಾಷ್ಟ್ರಕವಿ ಗೋವಿಂದ ಪೈ ಅವರ ಸಂಸ್ಮರಣೆ ಹಾಗೂ ‘ಕನಕ ಚಿಂತನ ವಿಸ್ತರಣ-1’ ಉಪನ್ಯಾಸ ಕೃತಿ ಬಿಡುಗಡೆ ಕಾರ್ಯಕ್ರಮವು ದಿನಾಂಕ 23-03-2024ರ ಬೆಳಿಗ್ಗೆ ಘಂಟೆ 10.೦೦ರಿಂದ ಉಡುಪಿಯ ಎಂ. ಜಿ. ಎಂ. ಕಾಲೇಜಿನ ಆವರಣದಲ್ಲಿರುವ ಧನ್ಯಾಲೋಕ (ಆರ್. ಆರ್. ಸಿ.) ದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಂಪಿ ವಿ. ವಿ. ಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ. ವಿ. ನಾವಡ ವಹಿಸಲಿದ್ದು, ವಿಶ್ರಾಂತ ಕುಲಪತಿಗಳು ಹಾಗೂ ಹಿರಿಯ ಸಾಹಿತಿಗಳಾದ ಪ್ರೊ. ಬಿ. ಎ. ವಿವೇಕ ರೈ ಕೃತಿ ಅನಾವರಣಗೊಳಿಸಲಿರುವರು. ನಂತರ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ. ಪುಂಡಿಕಾಯಿ ಗಣಪತಿ ಭಟ್ ಮೂಡಬಿದಿರೆ ಹಾಗೂ ನಿವೃತ್ತ ಪ್ರಾಚಾರ್ಯರಾದ ಡಾ. ಶಿವಾಜಿ ಜೋಯಿಸ್ ಮೈಸೂರು ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

