Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಕನಕ ಜಯಂತಿ’ 
    Literature

    ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಕನಕ ಜಯಂತಿ’ 

    November 22, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಬಾರ್ಕೂರು :  ಕನಕದಾಸ ಅಧ್ಯಯನ ಸಂಶೋಧನಾ ಪೀಠ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಹಾಗೂ ಬಾರಕೂರು ಇದರ ಜಂಟಿ ಆಶ್ರಯದಲ್ಲಿ ‘ಕನಕ ಜಯಂತಿ’ ಕಾರ್ಯಕ್ರಮವು ದಿನಾಂಕ 18 ನವೆಂಬರ್ 2024ರ ಸೋಮವಾರದಂದು  ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಂಗಳೂರು ಬಿ. ಬಿ. ಎಂ. ಪಿ. ಇದರ ಹೆಚ್ಚುವರಿ ಆಯುಕ್ತರಾದ ಶ್ರೀ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಮಾತನಾಡಿ “500 ವರ್ಷಗಳಿಗೂ ಹಿಂದೆ ಜೀವಿಸಿದ್ದ ಕನಕದಾಸರು ಇಂದೂ ನಮಗೆ ಪ್ರಸ್ತುತ. ಎಲ್ಲಾ ದಾಸರು ಕೀರ್ತನೆಗಳನ್ನು ಬರೆದಿದ್ದರೂ ಕನಕದಾಸರು ಅವರಲ್ಲಿ ಶ್ರೇಷ್ಠರಾಗಿ ಕಂಡುಬರುತ್ತಾರೆ.  ಅದಕ್ಕೆ ಕಾರಣ ಕನಕದಾಸರು ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವುದಕ್ಕೆ ಮಾಡಿದ ಪ್ರಯತ್ನ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ರತ್ನಗಳಾದ ನಳಚರಿತ್ರೆ, ರಾಮಧಾನ್ಯಚರಿತ್ರೆ, ಮೋಹನ ತರಂಗಿಣಿ ಹಾಗೂ ಹರಿಭಕ್ತಿಸಾರ. ಅವರ ಹರಿಭಕ್ತಿ ಸಾರದ 108 ಭಾಮಿನಿ ಷಟ್ಪದಿ ಪದ್ಯಗಳಿಗೆ ಇತ್ತೀಚೆಗೆ ವಿದ್ವಾಂಸರೊಬ್ಬರು 2000 ಪುಟಗಳ ವಿವರಣೆ ನೀಡಿರುವುದು ಅದರ ಶ್ರೇಷ್ಟತೆಗೆ ಸಾಕ್ಷಿ.” ಎಂಬುದಾಗಿ ಅಭಿಪ್ರಾಯ ಪಟ್ಟರು.
    ಕಾಲೇಜಿನ ಪ್ರಾಂಶುಪಾಲರಾದ  ಡಾ. ಎಸ್. ಭಾಸ್ಕರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ  ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ  ಪ್ರಾಸ್ತಾವಿಕವಾಗಿ ಮಾತನಾಡಿ  ಅತಿಥಿಗಳನ್ನು ಸ್ವಾಗತಿಸಿ, ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಶೈಲಜಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಪ್ರೊ. ರಾಧಾಕೃಷ್ಣ ವಂದಿಸಿದರು. ಕಾರ್ಯಕ್ರಮಕ್ಕೆ ಮೊದಲು  ಶ್ರೀ ರಾಜೇಶ್ ಶ್ಯಾನುಭೋಗ್ ಹಾಗೂ ಬಳಗದವರಿಂದ ‘ಕನಕ ಕೀರ್ತನೆ’ ಪ್ರಸ್ತುತಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯಲ್ಲಿ ‘ತುಳು ಭಾವಗೀತೆ ಸ್ಪರ್ಧೆ -2024’ | ನವೆಂಬರ್ 24
    Next Article ‘ಹಿರಿಯರೆಡೆಗೆ ಸಾಹಿತ್ಯದ ನಡಿಗೆ’ ಕೋಡು ಪಾಲಮೆ ತೋಟದ ಮನೆಯ ಶ್ಯಾಮರಾಯ ರಾವ್ ಮನೆಯಲ್ಲಿ 
    roovari

    Add Comment Cancel Reply


    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.