Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ | ಮೇ 15
    Book Release

    ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ | ಮೇ 15

    May 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕದಾಸರ ಎಲ್ಲಾ ಕೃತಿಗಳನ್ನು ದೇಶದ 14 ಭಾಷೆಗಳಲ್ಲಿ ಅನುವಾದ ಮಾಡುವ ಕಾರ್ಯ ಕೈಗೊಂಡು ಅದೀಗ ತಲಾ ಮೂರು ಸಂಪುಟಗಳಲ್ಲಿ ಅಚ್ಚಾಗಿ ಬಿಡುಗಡೆಗೆ ಸಿದ್ಧವಾಗಿವೆ.

    ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು 14 ಭಾಷೆಗಳಲ್ಲಿ ಅನುವಾದವಾಗಿ ಸಿದ್ಧವಾದ ಸಂಪುಟಗಳನ್ನು ಬಿಡುಗಡೆಗೊಳಿಸಲಿದ್ದಾರೆ. ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತಿತರ ಗಣ್ಯರು ಭಾಗವಹಿಸುವರು. ಸಂಸ್ಕೃತಿ ಚಿಂತಕರಾದ ಬಂಜಗೆರೆ ಜಯಪ್ರಕಾಶ್ ಕೃತಿಗಳ ಕುರಿತು ಮಾತನಾಡುವರು.

    ಮೂರು ಸಂಪುಟಗಳಲ್ಲಿ ತುಳು ಆವೃತ್ತಿ : ಕರಾವಳಿ ಕರ್ನಾಟಕದ ಪ್ರಮುಖ ಆಡುಭಾಷೆಯಾಗಿರುವ ತುಳುವಿನಲ್ಲಿ ಕನಕದಾಸರ ಸಮಗ್ರ ಕೃತಿಗಳು ಅನುವಾದವಾಗಿದ್ದು, ಹಿರಿಯ ಸಂಶೋಧಕ ವಿದ್ವಾಂಸರಾದ ಪ್ರೊ. ಎ.ವಿ. ನಾವಡ ತುಳು ಆವೃತ್ತಿಯ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಮಂದಿ ಹಿರಿಯ ಲೇಖಕರು ಆ ಕೃತಿಗಳನ್ನು ತುಳು ಭಾಷೆಗೆ ಅನುವಾದಿಸಿದ್ದಾರೆ. ದಿ. ಡಾ. ವಾಮನ ನಂದಾವರ, ಡಾ. ವಸಂತ ಕುಮಾರ್ ಪೆರ್ಲ (ಮೋಹನ ತರಂಗಿಣಿ); ಡಾ. ವಸಂತ ಭಾರದ್ವಾಜ, ಪ್ರೊ. ಟಿ.ಎ.ಎನ್. ಖಂಡಿಗೆ (ಕೀರ್ತನೆಲು, ಮುಂಡಿಗೆಲು); ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಆತ್ರಾಡಿ ಅಮೃತ ಶೆಟ್ಟಿ (ನಳ ಚರಿತ್ರೆ); ಮುದ್ದು ಮೂಡುಬೆಳ್ಳೆ (ರಾಮಧಾನ್ಯ ಚರಿತ್ರೆ); ಡಾ. ಕಾತ್ಯಾಯಿನಿ ಕುಂಜಿಬೆಟ್ಟು (ಹರಿಭಕ್ತಿಸಾರ) ಇವರು ಕನಕದಾಸರ ಸಮಗ್ರ ಕೃತಿಗಳನ್ನು ಅನುವಾದಿಸಿದ ವಿದ್ವಾಂಸರು.

    ದಿನಾಂಕ 15 ಮೇ 2026ರಂದು ಶುಕ್ರವಾರ ಸಂಜೆ ಗಂಟೆ 5-30ಕ್ಕೆ ಬೆಂಗಳೂರಿನ ಮಲ್ಲತಹಳ್ಳಿ ಸಾಂಸ್ಕೃತಿಕ ಸಮುಚ್ಚಯ ಕಲಾಗ್ರಾಮದಲ್ಲಿ ಕನಕದಾಸರ ಸಮಗ್ರ ಸಾಹಿತ್ಯ ಅನುವಾದ ಸಂಪುಟಗಳ ಬಿಡುಗಡೆ ಮತ್ತು ಕನಕ ಶಿಲ್ಪವನ ಅನಾವರಣ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಯೋಜನೆಯ ಎಲ್ಲಾ ಅನುವಾದಕರಿಗೆ ಗೌರವ ಪ್ರತಿಗಳನ್ನು ನೀಡಿ ಅಭಿನಂದಿಸಲಿದ್ದಾರೆ ಎಂದು ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.ತ. ಚಿಕ್ಕಣ್ಣ ತಿಳಿಸಿದ್ದಾರೆ.

    baikady Book release Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ಸ್ತ್ರೀ ಕೇಂದ್ರಿತ ಕಥಾಗುಚ್ಛ ‘ಉಮ್ಮಲ್ತಿ ಗುಡಿಯ ಸಾಕ್ಷಿ’
    Next Article ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.