ಪುತ್ತೂರು : ವಿವೇಕಾನಂದ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆಸುವ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು “ಕನಸುಗಳು – 2024” ನವಂಬರ್ 15 ಹಾಗೂ 16ನೇ ಶುಕ್ರವಾರ ಮತ್ತು ಶನಿವಾರದಂದು ನಡೆಯಲಿದೆ.
ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭ 15 ನವಂಬರ್ 2024ರಂದು ಬೆಳಗ್ಗೆ 9.00ರಿಂದ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಹಿರಿಯ ವಿಜ್ಞಾನಿ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಕೆ. ಎನ್. ಸುಬ್ರಹ್ಮಣ್ಯ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ. ಕೆ. ಎಮ್. ಕೃಷ್ಣ ಭಟ್ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿರ್ದೇಶಕರಾದ ಡಾ. ಕೃಷ್ಣಪ್ರಸನ್ನ ಕೆ. ಉಪಸ್ಥಿತರಿರಲಿದ್ದಾರೆ.
ಸಭಾಕಾರ್ಯಕ್ರಮದ ಬಳಿಕ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಹಲವು ರೀತಿಯ ಸ್ಪರ್ಧೆಗಳು ನಡೆಯಲಿದ್ದು, ಮೊದಲನೆಯ ದಿನ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚಿತ್ರಕಲೆ, ಕನ್ನಡ ಕವನರಚನೆ ಮತ್ತು ವಾಚನ, ಪ್ರಾಕೃತಿಕ ರಂಗೋಲಿ, ಯುವಪತ್ರಕರ್ತ, ದೃಶ್ಯಕಾವ್ಯ, ಯುವ ವಾಣಿಜ್ಯೋದ್ಯಮಿ, ಗಾಳಿಪಟ ಹಾರಾಟ, ಮುಖವರ್ಣಿಕೆ, ವೀಡಿಯೋ ಸಂಕಲನ ಮುಂತಾದ ಸ್ಪರ್ಧೆಗಳು ನಡೆಯಲಿವೆ.
ಅಪರಾಹ್ನ ವಿನಯ್. ವಿ ಜಾದವ್, ಉಪಾಧ್ಯಕ್ಷರು, ಬಿ ಎಸ್ ಬಿ ಎಸ್ ಬೆಂಗಳೂರು ಇವರಿಂದ ವ್ಯಕ್ತಿತ್ವ ವಿಕಸನ ಕಾರ್ಯಗಾರ ನಡೆಯಲಿದೆ. ಕಾರ್ಯಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಡಾ. ಮುರಳೀಕೃಷ್ಣ ರೈ ಉಪಸ್ಥಿತಲಿರಲಿದ್ದಾರೆ.
ನವಂಬರ 16ರ ಕನಸುಗಳು ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತಿಕೆ, ಕಲರವ ಸಾಂಸ್ಕೃತಿಕ ವೈವಿಧ್ಯ, ನಿಧಿಶೋಧ, ಭಗವದ್ಗೀತಾ ಕಂಠಪಾಠ ಸ್ಪರ್ಧೆಗಳು ನಡೆಯಲಿವೆ. ಅಪರಾಹ್ನ ‘ಕನಸುಗಳು’ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಕೆ. ವಹಿಸಿಕೊಳ್ಳಲಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ಈ ಸ್ಪರ್ಧೆಗಳಲ್ಲಿ ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚಿನ ಶಾಲೆಗಳಿಂದ 1000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ.
Subscribe to Updates
Get the latest creative news from FooBar about art, design and business.