Subscribe to Updates

    Get the latest creative news from FooBar about art, design and business.

    What's Hot

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ‘ಕನ್ನಡ ಝೇಂಕಾರ’
    Cultural

    ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ‘ಕನ್ನಡ ಝೇಂಕಾರ’

    April 27, 2026No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ದಿನಾಂಕ 25 ಏಪ್ರಿಲ್ 2026ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಿದ್ದ ‘ಕನ್ನಡ ಝೇಂಕಾರ’ ಕಾರ್ಯಕ್ರಮವು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದ ಮುಖ್ಯಸ್ಥ ಪ್ರೊಫೆಸರ್ ಹೆಚ್.ಎನ್. ಆಂಜನೇಯಪ್ಪ “ಕನ್ನಡದ ಸೊಗಸು ಶ್ರೀಮಂತಿಕೆ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಕನ್ನಡ ಝೇಂಕಾರ ಎಂದರೆ ನಮ್ಮ ಕನ್ನಡ ಭಾಷೆಯ ಮಧುರ ಧ್ವನಿಯ ಪ್ರತಿಫಲನ. ಕನ್ನಡವು ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಅಸ್ತಿತ್ವ. ಅದು ಒಂದು ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಈ ಭಾಷೆ ಅನೇಕ ಕವಿಗಳು, ಸಾಹಿತ್ಯಕರು ಮತ್ತು ಚಿಂತಕರಿಂದ ಬೆಳಗಿದೆ. ಈ ಕಾರ್ಯಕ್ರಮವು ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ಕನ್ನಡದ ಬಗ್ಗೆ ಆಸಕ್ತಿ ಗೌರವ ಮತ್ತು ಅಭಿಮಾನವನ್ನು ಬೆಳೆಸಲು ಸಹಕಾರಿಯಾಗಿದೆ. ಇಂದಿನ ತಂತ್ರಜ್ಞಾನದಲ್ಲಿ ನಾವು ಇಂಗ್ಲೀಷ್ ಮತ್ತು ಇತರ ಭಾಷೆಗಳೊಂದಿಗೆ ಮುಂದೆ ಸಾಗುತ್ತಿದ್ದರು ತಮ್ಮ ತಾಯಿ ಭಾಷೆಯನ್ನು ಮರೆಯಬಾರದು. ಕನ್ನಡವನ್ನು ದಿನನಿತ್ಯ ಜೀವನದಲ್ಲಿ ಬಳಸುವುದರಿಂದ ಮಾತ್ರ ಅದು ಜೀವಂತವಾಗಿರುತ್ತದೆ. ಈ ಕಾರ್ಯಕ್ರಮದ ಮೂಲಕ ನಾವು ನಮ್ಮ ಕನ್ನಡ ಭಾಷೆಯ ಮೇಲೆ ಇರುವ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುತ್ತಿದ್ದೇವೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರುವ ವೇದಿಕೆಯಾಗಿ ಈ ಕಾರ್ಯಕ್ರಮ ಕಾರ್ಯ ನಿರ್ವಹಿಸುತ್ತದೆ. ಹಾಡು, ನೃತ್ಯ, ಕವನ, ನಾಟಕ ಇತ್ಯಾದಿಗಳ ಮೂಲಕ ಕನ್ನಡದ ವೈವಿಧ್ಯತೆಯನ್ನು ನಾವು ಕಾಣಬಹುದು. ಇಂದಿನ ತಂತ್ರಜ್ಞಾನದಲ್ಲಿ ನಾವು ನಮ್ಮ ಭಾಷೆಯನ್ನು ಮರೆಯದೆ ಅದನ್ನು ಉಳಿಸಿ ಬೆಳೆಸುವುದು ಬಹಳ ಮುಖ್ಯ ಮನೆಗಳಲ್ಲಿ ಶಾಲೆಗಳಲ್ಲಿ ಸಾರ್ವಜನಿಕ ಜೀವನದಲ್ಲಿ ಕನ್ನಡವನ್ನು ಹೆಚ್ಚು ಹೆಚ್ಚು ಬಳಸುವ ಮೂಲಕ ನಾವು ಅದನ್ನು ಜೀವಂತವಾಗಿಡಬಹುದು ಎಂದ ಅವರು ಇಂತಹ ವೈವಿದ್ಯಮಯ ಕಾರ್ಯಕ್ರಮ ಆಯೋಜಿಸಿದ ರಾಣಿ ಪುಷ್ಪಲತಾ ದೇವಿ ಸಾರಥ್ಯದ KSSAP ಕಾರ್ಯ ಅಭಿನಂದನಾರ್ಹ” ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ತನ್ನ ವಿಶ್ರಾಂತ ಜೀವನದಲ್ಲೂ ಶಾಲಾ ಮಕ್ಕಳ ಬುದ್ಧಿಮತ್ತೆಯನ್ನು ವೃದ್ಧಿಸಲು 1400ಕ್ಕೂ ಹೆಚ್ಚು ಉಪನ್ಯಾಸ ನೀಡಿರುವ /ನೀಡುತ್ತಿರುವ ಬೆಂಗಳೂರಿನ ಓಂಕಾರಪ್ರಿಯ ಬಾಗೇಪಲ್ಲಿ ಇವರಿಗೆ KSSAP ಕನ್ನಡ ಕಣ್ಮಣಿ ಪ್ರಶಸ್ತಿ ಹಾಗೂ ಮಂಗಳೂರಿನ ಸೌಂಡ್ ಇಂಜಿನಿಯರ್ ಗಣೇಶ್ ಬಂಗೇರ ಇವರಿಗೆ ಸೂಪರ್ ಸೌಂಡ್ ಮಾಸ್ಟರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಸಹಾಯಕ ಪ್ರಾಧ್ಯಾಪಕಿ ಅಕ್ಷಯ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಆಯಿಷಾ ಪೆರ್ನೆ, ಮೂಗಪ್ಪ ಗಾಳೇರ, ಆಕೃತಿ ಐ.ಎಸ್.ಭಟ್, ತನ್ಸೀರಾ ಆತೂರು, ಸುಲೋಚನಾ ನವೀನ್ ಕೊಟ್ಟಾರ, ನಿರೀಕ್ಷಿತಾ ಮಂಗಳೂರು, ರಶ್ಮಿ ಸನಿಲ್, ಸುಖಲತ ಶೆಟ್ಟಿ, ರೇಖಾ ಸುದೇಶ್ ರಾವ್, ವ. ಉಮೇಶ್ ಕಾರಂತ, ಅನಿತಾ ಶೆಣೈ, ಎಂ.ಎ. ಮುಸ್ತಫಾ ಬೆಳ್ಳಾರೆ, ಓಂಕಾರಪ್ರಿಯ ಬಾಗೇಪಲ್ಲಿ ಮುಂತಾದ ಕವಿಗಳು ತಮ್ಮ ಸ್ವರಚಿತ ಕವನ ವಾಚಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮ.ನ.ಪಾ. ನಗರ ಯೋಜನಾಧಿಕಾರಿ ನಾಗೇಂದ್ರ ಎನ್. ಕವಿ ಬರಹಗಾರ, ಶಿವಪ್ರಸಾದ್ ಕೊಕ್ಕಡ, ಸಾಮಾಜಿಕ ಚಿಂತಕ ರಂಜನ್ ಕುಮಾರ್, ಸಾಮಾಜಿಕ ಚಿಂತಕ ಗಂಗಾಧರ್ ಗಾಂಧೀ ಭಾಗವಹಿಸಿದ್ದರು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಡಿನಾಡು ಸಾಂಸ್ಕೃತಿಕ ಕಲಾ ತಂಡ ಇವರಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ಗಾಯನದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಗಂಗಾಧರ್ ಗಾಂಧೀ ಬಳಗವು ಬೆಳ್ಳಿ ತೆರೆಯ ಬಂಗಾರದ ಗೀತೆಗಳನ್ನು ಸಾದರ ಪಡಿಸಿತು. ಕನ್ನಡ ಶಿಕ್ಷಕಿ ರೇಖಾ ಸುದೇಶ್ ರಾವ್ ಒಂದೇ ಮಾತರಂ ಗೀತೆ ಹಾಡಿ ಪ್ರಾರ್ಥಿಸಿದರು. ರಶ್ಮಿ ಸನಿಲ್ ನಿರೂಪಿಸಿದರು.

    baikady Cultural dance felicitation kannada Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ‘ಮಹಾನಾಯಕ ಕವಿಗೋಷ್ಠಿ’
    Next Article ನಾಟ್ಯನಿಕೇತನ ನೃತ್ಯ ಸಂಸ್ಥೆಯಿಂದ ‘ತಾಳ ಪ್ರಕ್ರಿಯೆ’ ಕಾರ್ಯಗಾರ | ಮೇ 02
    roovari

    Add Comment Cancel Reply


    Related Posts

    ನೃತ್ಯ ವಿಮರ್ಶೆ | ಭಾವ ರಸಗಳ ರಂಗಸಂಗಮದಲ್ಲಿ ಅರಳಿದ ರಂಗಪ್ರವೇಶ

    May 15, 2026

    ಪ್ರಶಸ್ತಿಗಳನ್ನು ಹೊಡೆದುಕೊಳ್ಳಬಾರದು – ಪಡೆದುಕೊಳ್ಳಬೇಕು : ಪತ್ರಕರ್ತ ರವೀಂದ್ರ ಜೋಶಿ

    May 15, 2026

    ಸಂತ ಅಲೋಶಿಯಸ್ ಸಭಾಂಗಣದಲ್ಲಿ ಲೋಕಾರ್ಪಣೆಗೊಂಡ ‘ವಿಂಚ್ಣಾರ್ ಕಾಣಿಯೊ’

    May 15, 2026

    ಪುಸ್ತಕ ವಿಮರ್ಶೆ | ಚಿತ್ರಪಾಡಿ ಉಪೇಂದ್ರ ಸೋಮಯಾಜಿಯವರ ‘ಕೃತಿ ಸಂಕೀರ್ಣ’

    May 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.