ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಹಿರಿಯ ಮಾರ್ಗದರ್ಶಕರು, ಯುವ ಕಾರ್ಯಕರ್ತರು, ಕನ್ನಡ ಪರ ಸಂಘಟಕರು, ಪತ್ರಕರ್ತರ ಸ್ನೇಹ ಸೇತುವೆಯಾಗಿ ‘ಕನ್ನಡ ಮೈತ್ರಿ ಸಂಗಮ’ ಕಾರ್ಯಕ್ರಮವು ಕಾಸರಗೋಡಿನ ಉಡುಪಿ ಗಾರ್ಡನ್ ಸಭಾಂಗಣ ‘ಮಥುರಾ’ದಲ್ಲಿ ದಿನಾಂಕ 30-01-2024ರಂದು ನಡೆಯಿತು. ಕೇಂದ್ರ ಸಾಹಿತ್ಯ ಪರಿಷತ್ತಿನ ಸಲಹಾ ಸಮಿತಿ ಸದಸ್ಯ ಡಾ. ಮುರಲೀ ಮೋಹನ ಚೂಂತಾರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಎನ್. ಮೋಹನದಾಸ್ ಮುಖ್ಯ ಅತಿಥಿಯಾಗಿದ್ದರು.
ಕಾರ್ಯಕ್ರಮದಲ್ಲಿ ಕ.ಸಾ.ಪ. ಗಡಿನಾಡ ಘಟಕದ ಪೂರ್ವಾಧ್ಯಕ್ಷ ನ್ಯಾಯವಾದಿ ಐ.ವಿ. ಭಟ್, ಭಾರತ ಸರಕಾರದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಜಿ. ಕುಂದಣಗಾರ ಗಡಿನಾಡ ಪ್ರಶಸ್ತಿ ಪುರಸ್ಕೃತ ಡಾ. ರಮಾನಂದ ಬನಾರಿ ಅವರನ್ನುಅಭಿನಂದಿಸಲಾಯಿತು. ಪತ್ರಕರ್ತ ಎಂ.ನಾ. ಚಂಬಲ್ತಿಮಾರ್, ಉಪನ್ಯಾಸಕ ರತ್ನಾಕರ ಮಲ್ಲಮೂಲೆ, ಅಧ್ಯಾಪಕ ರಾಜಾರಾಮ ರಾವ್ ಮೀಯಪದವು ಅಭಿನಂದನಾ ಭಾಷಣ ಮಾಡಿದರು. ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ, ನ್ಯಾಯವಾದಿ ಥೋಮಸ್ ಡಿಸೋಜ ಅಭಿನಂದನಾ ಪತ್ರ ವಾಚಿಸಿದರು. ನ್ಯಾಯವಾದಿ ಐ.ವಿ. ಭಟ್ ಮತ್ತು ಸತ್ಯನಾರಾಯಣ ಬೆಳೇರಿ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಪರಿಷತ್ತಿನ ಪದಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ನ್ಯಾಯವಾದಿ ಥೋಮಸ್ ಡಿಸೋಜ, ಕವಿತಾ ಕೂಡ್ಲು, ಆಯಿಷಾ ಪೆರ್ಲ, ಪ್ರವೀಣ್ ಮೊದಲಾದವರು ಉಪಸ್ಥಿತರಿದ್ದರು.
ಖ್ಯಾತ ಗಾಯಕ ಕಿಶೋರ್ ಪೆರ್ಲ ಪ್ರಾರ್ಥನೆ ಹಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.