ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ ಮತ್ತು ಸರಕಾರಿ ಪ್ರೌಢ ಶಾಲೆ ಅಂಬ್ಲಮೊಗರು ಮಂಗಳೂರು ದಕ್ಷಿಣ ವಲಯ ಇವರ ಸಹಯೋಗದೊಂದಿಗೆ ‘ಕನ್ನಡ ನವೋದಯ ಸಂಭ್ರಮ’ ಕಾರ್ಯಕ್ರಮವನ್ನು ದಿನಾಂಕ 17 ಜುಲೈ 2025ರಂದು ಅಪರಾಹ್ನ 2-00 ಗಂಟೆಗೆ ಅಂಬ್ಲಮೊಗರು ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
‘ಕನ್ನಡ ನವೋದಯ ಕವಿಗಳು : ಕುವೆಂಪು, ಬೇಂದ್ರೆ’ ಎಂಬ ವಿಷಯದ ಬಗ್ಗೆ ಕತೆಗಾರರಾದ ಡಾ. ವಿಶ್ವನಾಥ ಎನ್. ನೇರಳೆಕಟ್ಟೆ ಇವರಿಂದ ಉಪನ್ಯಾಸ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷರಾದ ಡಾ. ಧನಂಜಯ ಕುಂಬ್ಳೆ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದವರಿಂದ ಭಾವಗೀತೆ, ಜಾನಪದ ಗೀತೆ ಮತ್ತು ಕವನ ವಾಚನ ಪ್ರಸ್ತುತಿ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.