Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಿಶೇಷೋಪನ್ಯಾಸ
    Literature

    ವಿಶ್ವಮಂಗಳ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಿಶೇಷೋಪನ್ಯಾಸ

    November 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಡಿಪು : ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ಘಟಕ ಮತ್ತು ವಿಶ್ವಮಂಗಳ ವಿದ್ಯಾಸಂಸ್ಥೆ ಮಂಗಳಗಂಗೋತ್ರಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ವಿಶೇಷೋಪನ್ಯಾಸ ಕಾರ್ಯಕ್ರಮ ದಿನಾಂಕ 01-11-2023ರ ಬುಧವಾರದಂದು ವಿಶ್ವಮಂಗಳದಲ್ಲಿ ನಡೆಯಿತು.

    ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮುಡಿಪು ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಲತಾರವರು “ಎಲ್ಲರನ್ನು ಸಮಭಾವದಿಂದ ನೋಡುವ ಗೌರವಿಸುವ ಮನೋಭಾವ ಕನ್ನಡಿಗರದ್ದು. ಪರಧರ್ಮ, ಪರ ವಿಚಾರಗಳನ್ನೂ ಗೌರವಿಸುತ್ತಾ ಬಂದ ಸಹಿಷ್ಣು ಪರಂಪರೆ ಕನ್ನಡ ನಾಡಿನದ್ದು. ಕನ್ನಡ ಭಾಷೆ ಸಾಹಿತ್ಯದ ಕುರಿತಾದ ತಿಳುವಳಿಕೆಯನ್ನು ಹೆಚ್ಚಿಸುವ ಕಾರ್ಯಕ್ರಮಗಳು ಗ್ರಾಮಾಂತರ ಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕಿದೆ. ಈ ನಿಟ್ಟಿನಲ್ಲಿ ಉಳ್ಳಾಲದ ಕನ್ನಡ ಸಾಹಿತ್ಯ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ.” ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಡಾ. ಪರಮೇಶ್ವರ ವಹಿಸಿದ್ದರು. ಸಮಾರಂಭದಲ್ಲಿ ಉಳ್ಳಾಲ ಕಸಾಪ ಅಧ್ಯಕ್ಷ ಡಾ. ಧನಂಜಯ ಕುಂಬ್ಳೆ, ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಉಳ್ಳಾಲ ಹೋಬಳಿ ಅಧ್ಯಕ್ಷೆ ವಿಜಯಲಕ್ಷ್ಮೀ ಪ್ರಸಾದ್ ರೈ, ವಿಶ್ವಮಂಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರವೀಣ್, ವಿಶ್ವಮಂಗಳ ವಿದ್ಯಾಸಂಸ್ಥೆಯ ಕಾಲೇಜು ಪ್ರಾಂಶುಪಾಲೆ ಪೂರ್ಣಿಮಾ. ಡಿ ಮತ್ತು ವಿಶ್ವಮಂಗಳ ವಿವಿಧ ಶಾಲೆಗಳ ಮುಖ್ಯಸ್ಥರುಗಳಾದ ಪ್ರಿಯಾ, ಶೋಭಾವತಿ, ಹಂಸಗೀತ ಹಾಗೂ ವೆರೋನಿಕಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಡಾ.ಲತಾ ಅಭಯ್ ಇವರಿಗೆ ರಾಜ್ಯೋತ್ಸವ ಸಮಾರಂಭದ ಗೌರವ ಸನ್ಮಾನವನ್ನು ಮಾಡಲಾಯಿತು.

    ವಿಶ್ವಮಂಗಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರಿಯಾ ಸ್ವಾಗತಿಸಿ, ಶ್ರಿಯಾ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿನಿ ತ್ವಿಶಾ ನಿರೂಪಿಸಿ, ಸಹಶಿಕ್ಷಕಿ ಆಶಾಲತ ವಂದಿಸಿದರು. ಸಮಾರಂಭದ ಬಳಿಕ ಸಮೂಹ ಗಾಯನ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬಸವಣ್ಣ – ಕನಕದಾಸ ವಿಚಾರ ಸಂಕಿರಣ ಸಮಾರೋಪ
    Next Article ಬೆಟ್ಟಂಪಾಡಿಯ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನೆ
    roovari

    Add Comment Cancel Reply


    Related Posts

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ | ಮೇ 31

    May 27, 2025

    ಕೂಡ್ಲಿ ಗುರುರಾಜ್‌ ಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’

    May 27, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಬೆಳದಿಂಗಳ ಸೋನೆಮಳೆ’ ಆಯ್ಕೆ

    May 27, 2025

    ಪೆರ್ವಾಜೆ ಶಾಲೆಯಲ್ಲಿ ನಾಟಕ ಮತ್ತು ಕವನ ಸಂಕಲನ ಕೃತಿ ಬಿಡುಗಡೆ ಕಾರ್ಯಕ್ರಮ

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.