ಮೈಸೂರು : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ವೇದಿಕೆಯ ವತಿಯಿಂದ ದಿನಾಂಕ 03 ನವೆಂಬರ್ 2024ರಂದು ಮೈಸೂರಿನ ಸಾಹಿತ್ಯ ಪರಿಷತ್ತು ಸಭಾ ಭವನದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿ ಗೋಷ್ಠಿ ಹಾಗೂ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಹಳದಿಪುರದ ಸಾಹಿತಿ ಶುಭಾ ವಿಷ್ಣು ಅವರ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಮಡ್ಡಿಕೇರಿ ಗೋಪಾಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅವದೂತ ಮಹರ್ಷಿಗಳು ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತ್ಯಾಗರಾಜ್, ಸುಮಾ ಹಡಪದ ಮತ್ತಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Previous Articleಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ವ್ಯಂಗ್ಯಚಿತ್ರ ರಚನಾ ಕಾರ್ಯಾಗಾರ