Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕ.ಸಾ.ಪ.ದಿಂದ ಕನ್ನಡ ರಾಜ್ಯೋತ್ಸವದ ಅದ್ದೂರಿ ಆಚರಣೆ
    Cultural

    ಕ.ಸಾ.ಪ.ದಿಂದ ಕನ್ನಡ ರಾಜ್ಯೋತ್ಸವದ ಅದ್ದೂರಿ ಆಚರಣೆ

    November 8, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಂಟಿಕೊಪ್ಪ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ಕ.ಸಾ.ಪ. ಹೋಬಳಿ, ಘಟಕ ಕನ್ನಡ ಸಾಹಿತ್ಯ ಪರಿಷತ್ತು ಐಗೂರು ಕೇಂದ್ರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ದಿನಾಂಕ 01 ನವೆಂಬರ್ 2024ರಂದು ಕ.ಸಾ.ಪ. ಐಗೂರು ಕೇಂದ್ರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಕನ್ನಡ ಧ್ವಜವನ್ನು ಐಗೂರು ಕ.ಸಾ.ಪ. ಘಟಕದ ಅಧ್ಯಕ್ಷ ಸಂಗಾರು ಕೀರ್ತಿಪ್ರಸಾದ್ ಆರೋಹಣ ಮಾಡಿದ ನಂತರ ಕನ್ನಡಾಂಬೆ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಕನ್ನಡಾಭಿಮಾನಿಗಳು ಅರ್ಪಿಸಿದರು.

    ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಅಜಿತ್‌ಕುಮಾರ್‌ ಮಾತನಾಡಿ, “ಕರ್ನಾಟಕದ ಜಲ, ನೆಲ ಸಂಸ್ಕೃತಿ ಸಂಪ್ರಾದಾಯವನ್ನು ಉಳಿಸಿ ಬೆಳೆಸಲು ಕನ್ನಡ ನೆಲದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ” ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಐಗೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಟಿ.ಎಸ್. ಪೂರ್ಣಕುಮಾರ್, “ಸುವರ್ಣ ಮಹೋತ್ಸವದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವ ಈ ಕಾಲಘಟ್ಟದಲ್ಲಿ ಶಾಸ್ತ್ರೀಯ ಭಾಷೆಗೆ ಸೇರ್ಪಡೆಯಾಗುತ್ತಿರುವುದು ಅರ್ಥಪೂರ್ಣವಾಗಿದೆ” ಎಂದರು.

    ಸೋಮವಾರಪೇಟೆ ತಾಲೂಕು ಕ.ಸಾ.ಪ. ಸದಸ್ಯ ಶಾಫಿ ಸದಿ ಮಾತನಾಡಿ, “ಪ್ರಪಂಚದಲ್ಲೇ ವೈವಿಧ್ಯತೆಯಿಂದ ಕೂಡಿದ ಭಾಷೆ ಸಂಸ್ಕೃತಿ ಕನ್ನಡದಾಗಿದೆ. ಹೃದಯ ವಿಶಾಲತೆ ಹೊಂದಿದ ಕನ್ನಡಿಗರು ದೇಶದ ಅವಿಭಾಜ್ಯ ಅಂಗವಾಗಿದ್ದಾರೆ” ಎಂದರು. ಕಾಜೂರು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕನ್ನಡ ಭಾಷೆಯ ನೃತ್ಯ, ಭಾಷಣ, ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಮೆರಗು ನೀಡಿದರು. ಸೋಮವಾರಪೇಟೆ ಕ.ಸಾ.ಪ. ಹೋಬಳಿ ಘಟಕದ ಐಗೂರು ಕೇಂದ್ರದ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು.

    ಐಗೂರು ಹೋಬಳಿ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ವಿಶ್ವನಾಥ್ ರಾಜ್ ಅರಸು, ಕೋಶಾಧಿಕಾರಿ ಬೆಳ್ಯಪ್ಪ, ಮಾಚ್ಚಂಡ ಅಶೋಕ, ಹೇಮಂತ್, ಸೋಮವಾರಪೇಟೆ ತಾಲೂಕು ಕ.ಸಾ.ಪ. ಖಜಾಂಜಿ ಕೆ.ಪಿ. ದಿನೇಶ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ, ಗೌರವ ಕಾರ್ಯದರ್ಶಿ ಕಾಜೂರು ಶಾಲೆ ಮುಖ್ಯೋಪಾದ್ಯಾಯನಿ ಸರಳಾಕುಮಾರಿ ಉಪಸ್ಥಿತರಿದ್ದರು. ಶಿಕ್ಷಕಿ ಅನೂಸೂಯ ನಿರೂಪಿಸಿ, ಸರಳಕುಮಾರಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಕನಕ ಗೌರವ ಪ್ರಶಸ್ತಿ’ ಮತ್ತು ‘ಕನಕ ಯುವ ಪುರಸ್ಕಾರ’ಗಳ ಘೋಷಣೆ
    Next Article ಶ್ರೀ ಗುರುರಾಜ್ ಹೊಸಕೋಟೆಯವರು ‘ನೇಕಾರ ಸಾಹಿತ್ಯ ಸಮ್ಮೇಳನ’ದ ಸರ್ವಾಧ್ಯಕ್ಷರಾಗಿ ಆಯ್ಕೆ
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025

    ಬೆಂಗಳೂರಿನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ಮತ್ತು ಭಾರತೀಯ ನಾದ ಸೌರಭ ಸಂಗೀತೋತ್ಸವ | ಜೂನ್ 01

    May 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.