Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಸಂಗೀತ ವಿದ್ಯಾಸಾಗರ ಆರ್. ಆರ್. ಕೇಶವಮೂರ್ತಿ

    May 27, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರ

    May 27, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
    Kannada

    ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ದಿನಾಂಕ 05-05-2024ರಂದು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ, ಸಂಘಟಕ, ಕವಿ ಅಬೂಬಕರ್ ಅಮ್ಮುಂಜೆ “ಭಾಷೆಯನ್ನು ಸಮರ್ಪಕವಾಗಿ ಬಳಕೆ ಮಾಡಿ ಉತ್ತಮ ಸಾಹಿತ್ಯ ರಚಿಸಿ ಓದುಗರ ಶೋತೃಗಳ ಮನಸನ್ನು ಗೆದ್ದಾಗ ಉದ್ದೇಶ ಸಾರ್ಥಕ ಆಗುತ್ತದೆ. ಪರಿಷತ್ತಿನ ಹುದ್ದೆಯನ್ನು ವಹಿಸಿಕೊಂಡರಷ್ಟೇ ಸಾಲದು, ಪರಿಷತ್ತಿನ ಉದ್ದೇಶವನ್ನು ಕನ್ನಡಿಗರಿಗೆ ತಿಳಿಸುವಂತಹ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದು ಅನಿವಾರ್ಯ” ಎಂದು ಹೇಳಿದರು.

    ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು ಮಾತನಾಡಿ “ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಸಾರಥ್ಯವನ್ನು ನೀರ್ಪಾಜೆ ಭೀಮ ಭಟ್ಟರಿಂದ ವಿಶ್ವನಾಥ ಬಂಟ್ವಾಳ ತನಕ ಹಲವರು ಸಮರ್ಥವಾಗಿ ನಿರ್ವಹಿಸಿದ್ದಾರೆ‌‌. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳ ಪೈಕಿ ಬಂಟ್ವಾಳ ತಾಲ್ಲೂಕಿನಲ್ಲಿ ಇರುವಷ್ಟು ದತ್ತಿ ಉಪನ್ಯಾಸಗಳು ಇನ್ನೆಲ್ಲೂ ಇಲ್ಲ‌. ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಕ್ಕೆ ಉತ್ತಮ ಸಾಹಿತಿಗಳನ್ನು, ಕಲಾವಿದರನ್ನು ರಂಗಕರ್ಮಿಗಳು, ರಾಜಕಾರಣಿಗಳನ್ನು, ಪತ್ರಕರ್ತರನ್ನು, ಶಿಕ್ಷಣ ತಜ್ಞರನ್ನು, ಸಾಮಾಜಿಕ ಧಾರ್ಮಿಕ ಮುಖಂಡರನ್ನು ಬಂಟ್ವಾಳ ತಾಲೂಕು ನೀಡಿದೆ” ಎಂದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಲ್ಲೇಖಿಸಿ “ರಾಜ್ಯಕ್ಕೆ ಮಾದರಿ ಎನಿಸಿದ ಇಂತಹ ಸಮ್ಮೇಳನಗಳು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ನಡೆಯಬೇಕು. ತಾಲೂಕು ಘಟಕ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಮತ್ತು ಹೋಬಳಿ ಸಮ್ಮೇಳನಗಳು ನಡೆಯಲಿವೆ” ಎಂದರು.

    ಕಾರ್ಯಕಾರಿ ಸಮಿತಿ ಸದಸ್ಯ ಜಯರಾಮ ಪಡ್ರೆ ಸ್ವಾಗತಿಸಿ, ವಂದಿಸಿದರು. ಪ್ರಸ್ತಾವನೆಗೈದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವಿ.ಸು. ಭಟ್ ಅವರು ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ
    Next Article ಉಜಿರೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ಯಕ್ಷಗಾನ ಪ್ರದರ್ಶನ
    roovari

    Add Comment Cancel Reply


    Related Posts

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಯಕ್ಷಗಾನ ವಿಚಾರ ಸಂಕಿರಣ, ಯಕ್ಷಗಾನ ಪ್ರದರ್ಶನ

    May 27, 2025

    ಉದ್ಘಾಟನೆಗೊಂಡ ಪುತ್ರಕಾಮೇಷ್ಠಿ ಯಕ್ಷಗಾನ ತಾಳಮದ್ದಳೆ

    May 27, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾವಿದರ ಸಮಾವೇಶ | ಮೇ 31

    May 27, 2025

    ಕೂಡ್ಲಿ ಗುರುರಾಜ್‌ ಗೆ ‘ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ’

    May 27, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.