ಮಡಿಕೇರಿ: ಕರ್ನಾಟಕ ಸುವರ್ಣ ಸಂಭ್ರಮ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಅಭಿಮಾನಿಗಳು ಮತ್ತು ನಾಗರಿಕರ ಸಹಭಾಗಿತ್ವದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ದಿನಾಂಕ 11 ನವೆಂಬರ್ 2024ರಂದು ಕುಶಾಲನಗರದಲ್ಲಿ 5 ಸಾವಿರ ಮಂದಿ ಪಾಲ್ಗೊಂಡು ‘ಕನ್ನಡ ಕಂಠ ಗಾಯನ’ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ತಿಳಿಸಿದ್ದಾರೆ.
ಕುಶಾಲನಗರದ ರಥ ಬೀದಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಐದು ಸಹಸ್ರ ಮಂದಿಯಿಂದ ‘ಕನ್ನಡ ನಾಡಗೀತೆ, ರೈತಗೀತೆ ಮತ್ತು ಹುಟ್ಟದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಗೀತ ಗಾಯನ’ ನಡೆಯಲಿದೆ.
1973ರಲ್ಲಿ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಹೆಸರಾಗಿ 50 ವರ್ಷ ಪೂರ್ಣಗೊಂಡಿರುವ ಸುಸಂದರ್ಭದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷ ಪೂರ್ತಿ ವೈವಿದ್ಯಮಯ ಹಾಗೂ ವರ್ಣಮಯ ಸುವರ್ಣ ಸಂಭ್ರಮಾಚರಣೆಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.