ಮುಲ್ಕಿ : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ(ರಿ.) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ ಕಾರ್ಯಕ್ರಮ ‘ಕನ್ನಡದ ನಡಿಗೆ……ಶಾಲೆಯ ಕಡೆಗೆ’ ದಿನಾಂಕ 17 ಅಕ್ಟೋಬರ್ 2025ರ ಶುಕ್ರವಾರ ಪೂರ್ವಾಹ್ನ 11.00 ರಿಂದ ಸಿ. ಎಸ್. ಐ. ಇಂಗ್ಲಿಷ್ ಮೀಡಿಯಂ ಶಾಲೆ, ಕಾರ್ನಾಡ್, ಮುಲ್ಕಿ ಇಲ್ಲಿ ನಡೆಯಲಿದೆ.
ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ಗೌರವಾಧ್ಯಕ್ಷರಾದ ಡಾ. ರವೀಂದ್ರ ಜೆಪ್ಪುಮಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಸಿ. ಎಸ್. ಐ. ಇಂಗ್ಲಿಷ್ ಮೀಡಿಯಂ ಶಾಲೆ ಕಾರ್ನಾಡ್ ಇಲ್ಲಿನ ಮುಖ್ಯ ಶಿಕ್ಷಕಿಯಾದ : ಶ್ರೀಮತಿ ಶಾಂತಿ ಸುಹಾಸಿನಿ ಕರ್ಕಡ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ದ. ಕ. ಜಿಲ್ಲೆ ಇದರ ಅಧ್ಯಕ್ಷರಾದ ಕೊಳ್ಚಪ್ಪೆ ಗೋವಿಂದ ಭಟ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕವನ ವಾಚನ, ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಶಾಲಾ ಅಧಿಕೃತರಿಗೆ ಅಭಿನಂದನೆ, ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮುಂತಾದವು ನಡೆಯಲಿವೆ.

