ಕಾಂತಾವರ : ಕನ್ನಡ ಸಂಘ ಕಾಂತಾವರ (ರಿ.) ಇದರ ವತಿಯಿಂದ ‘ಕಾಂತಾವರ ಉತ್ಸವ 2024’ವನ್ನು ದಿನಾಂಕ 01 ನವೆಂಬರ್ 2024ರಂದು 10-00 ಗಂಟೆಗೆ ಕಾಂತಾವರ ರಥಬೀದಿಯ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ದತ್ತಿ ನಿಧಿಗಳ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ನಾಡಿಗೆ ನಮಸ್ಕಾರ ಗ್ರಂಥ ಮಾಲೆಯ ನೂತನ ಹೊತ್ತಿಗೆಗಳ ಅನಾವರಣ ನಡೆಯಲಿದೆ.
ಈ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡು ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರು ಉದ್ಘಾಟನೆ ಮಾಡಲಿದ್ದು, ಕ.ಸಾ.ಪ. ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಇವರು ಅಧ್ಯಕ್ಷತೆ ವಹಿಸಲಿದ್ದು, ಪ್ರಶಸ್ತಿ ಪ್ರದಾನ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಹಿರಿಯ ಸಾಹಿತಿ ಪ್ರೊ. ಪಿ.ಎನ್. ಮೂಡಿತ್ತಾಯ ಇವರು ಕೃತಿಗಳನ್ನು ಅನಾವರಣಗೊಳಿಸಲಿರುವರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಾಟುಕವಿ ವಿರಚಿತ ಕರ್ನಾಟಕ ಭಾಗವತದ ‘ಮಹಾಬಲಿ’ ಇದರ ಗಮಕ ವಾಚನ ವ್ಯಾಖ್ಯಾನ ನಡೆಯಲಿದ್ದು, ಶ್ರೀ ಯಜ್ಞೇಶ ಆಚಾರ್ಯ ವಾಚನ ಮತ್ತು ಶ್ರೀ ಸರ್ಪಂಗಳ ಈಶ್ವರ ಭಟ್ ಇವರು ವ್ಯಾಖ್ಯಾನ ನಡೆಸಿಕೊಡಲಿದ್ದಾರೆ.