ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕೇಂದ್ರ ಕನ್ನಡ ಕ್ರಿಯಾ ಸಮಿತಿ ಇದರ ವತಿಯಿಂದ ಹಿರಿಯ ಕನ್ನಡಪರ ಹೋರಾಟಗಾರ, ಸಾಹಿತಿ ಹಾಗೂ ಪರ್ತಕರ್ತರೂ ಆದ ಜಾಣಗೆರೆ ವೆಂಕಟರಾಮಯ್ಯ ಇವರಿಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ 25 ನವೆಂಬರ್ 2025ರಂದು ಬೆಳಗ್ಗೆ 11-00 ಗಂಟೆಗೆ ಕ.ರಾ.ರ.ಸಾ. ನಿಗಮದ ಆನೇಕಲ್ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಮತಿ ಬೇಬಿಬಾಯಿ ಇವರು ಧ್ವಜಾರೋಹಣ ಮತ್ತು ಮೆರವಣಿಗೆ ಉದ್ಘಾಟನೆ ಮಾಡಲಿದ್ದು, ವಿವಿಧ ಜಾನಪದ ಕಲಾ ತಂಡಗಳು ಆನೇಕಲ್ ಬಸ್ ನಿಲ್ದಾಣದಿಂದ ಆನೇಕಲ್ ಬಸ್ ಘಟಕದವರೆಗೆ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಮಾನ್ಯ ಸಾರಿಗೆ ಹಾಗೂ ಮುಜುರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಇವರು ಈ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದು, ವಿಭಾಗೀಯ ನಿಯಂತ್ರಣಾಧಿಕಾರಿ ಪುರುಷೋತ್ತಮ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾನ್ಯ ಶಾಸಕರಾದ ಬಿ. ಶಿವಣ್ಣ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ರಾಜ್ಯ ಗೌರವಾಧ್ಯಕ್ಷರಾದ ವ.ಚ. ಚನ್ನೇಗೌಡ ಇವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.


