Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ | ಮಾರ್ಚ್ 01ರಿಂದ 08

    February 25, 2026

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
    Kannada

    ಮುಕ್ಕದ ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

    November 7, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯ ಮುಕ್ಕದಲ್ಲಿ ದಿನಾಂಕ 05 ನವೆಂಬರ್ 2024ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

    ಕಾರ್ಯಕ್ರಮದ ಮುಖ್ಯ ಅತಿಥಿ ಅಗರಿ ಸಂಸ್ಮರಣಾ ವೇದಿಕೆ ಅಧ್ಯಕ್ಷರು ಹಾಗೂ ಅಗರಿ ಎಂಟರ್ಪ್ರೈಸಸ್ ಮಾಲೀಕರಾದ ಶ್ರೀ ಅಗರಿ ರಾಘವೇಂದ್ರ ರಾವ್ ಮಾತನಾಡಿ “ಕಲಿಯುವ ಅವಕಾಶ ಇರುವುದು ವಿದ್ಯಾರ್ಥಿಗಳಿಗೆ ಮಾತ್ರ. ಆ ಕಾರ್ಯ ಕಾಲೇಜಿನಲ್ಲಿ ಸಾಧ್ಯ. ಇಂದು ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿರುವುದು ತುಂಬಾ ಸಂತಸವಾಗುತ್ತಿದೆ. ಪುಸ್ತಕಗಳನ್ನು ಓದುವ ಮಕ್ಕಳಲ್ಲಿ ಉತ್ತಮ ಮೌಲ್ಯವನ್ನು ಬೆಳೆಸುವ ಕಾರ್ಯ ಈ ಕಾಲೇಜಿನಲ್ಲಿ ಅತ್ಯುತ್ತಮವಾಗಿ ನಡೆಯುತ್ತಿದೆ” ಎಂದು ಶ್ಲಾಘಸಿದರು.

    ಇನ್ನೊರ್ವ ಅತಿಥಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶ್ರೀ ಶ್ರೀನಾಥ್ ಎಂ.ಪಿ. ಮಾತನಾಡಿ, “ಪ್ರಪಂಚದ ಎಲ್ಲೆಲ್ಲಿ ಕನ್ನಡಿಗರಿದ್ದೆವೋ ಅಲ್ಲೆಲ್ಲಾ ಜಾತ್ರೆಯ ಸ್ವರೂಪದಲ್ಲಿ ನಾವು ರಾಜ್ಯೋತ್ಸವ ಆಚರಿಸುತ್ತೇವೆ. ಮಾತೃ ಭಾಷೆ ಬೇರೆಬೇರೆಯಾಗಿದ್ದರೂ ನಾವೆಲ್ಲರೂ ಕನ್ನಡಿಗರು ಎಂಬ ನಮ್ಮೆಲರಲ್ಲೂ ಇದೆ” ಎಂದು ಸಂತಸ ವ್ಯಕ್ತಪಡಿಸಿದರು. “ಇಂದಿನ ವಿದ್ಯಾರ್ಥಿಗಳು ಮುಂದಿನ ಸಾಹಿತಿಗಳು ಕನ್ನಡದ ಸಾಹಿತ್ಯ ತೇರನ್ನು ಎಳೆಯುವವರು ಈ ವಿದ್ಯಾರ್ಥಿಗಳು” ಎಂದು ಶುಭ ಹಾರೈಸಿದರು.

    ಶ್ರೀನಿವಾಸ ವಿಶ್ವವಿದ್ಯಾಲಯದ ಮಾನ್ಯ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, “ಕನ್ನಡ ಭಾಷೆ ಉಳಿಸಿಕೊಳ್ಳಬೇಕಾದ್ದದ್ದು ಕನ್ನಡಿಗರಾದ ನಮ್ಮ ಕರ್ತವ್ಯ. ನಮ್ಮ ರಾಜ್ಯ, ದೇಶದಿಂದ ಹೊರ ಹೋದಾಗ ನಮ್ಮ ಭಾಷೆಯ ಮಹತ್ವ ಅರಿಯಬಹುದು. ಅಪರಿಚಿತರು ನೀವು ಕನ್ನಡಿಗರೇ ಎಂದು ಗುರುತಿಸಿ ಮಾತನಾಡುವ ಪರಿಚಯ ಒಂದು ಉತ್ತಮ ಅನುಭವ. ಇಂದು ಬೆಂಗಳೂರಿನ ಅಂಗಡಿಗಳಲ್ಲೂ ಅನ್ಯಭಾಷಿಕರು ಕನ್ನಡ ಕಲಿತು ಸಂವಹನ ನಡೆಸುತ್ತಿರುವ ಪರಿವರ್ತನೆ ಸ್ವಾಗತಾರ್ಹ” ಎಂದರು.

    ಎಸ್.ಯು.ಐ.ಇ.ಟಿ. ಡೀನ್ ಡಾ. ರಾಮಕೃಷ್ಣ ಎನ್. ಹೆಗಡೆ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್, ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ಕುಲಸಚಿವರಾದ ಡಾ. ಅಜಯ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಪ್ರೊ. ಶ್ರೀನಾಥ್ ರಾವ್ ಕೆ. ಸ್ವಾಗತಿಸಿ, ವೃಷಭೇಂದ್ರ ಸ್ವಾಮಿ ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಧಾರವಾಡದಲ್ಲಿ ಪಂಡಿತ್ ವಸಂತ ಕನಕಾಪುರ್ ಸ್ಮರಣಾರ್ಥ ‘ಸಂಗೀತ ಕಾರ್ಯಕ್ರಮ’ | ನವೆಂಬರ್ 17
    Next Article ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ‘ವಚನ ಸುಧೆ’ | ನವೆಂಬರ್ 09
    roovari

    Add Comment Cancel Reply


    Related Posts

    ನಂದಿನಿ ನದಿಯ ಕುದ್ರುವಿನಲ್ಲಿ ಮೂಲ್ಕಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ | ಮಾರ್ಚ್ 01

    February 25, 2026

    ಮೇಘಮೈತ್ರಿ ದ್ವಿತೀಯ ಯುವ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ವೆಂಕಟೇಶ ಗುಡೆಪ್ಪನವರ ಆಯ್ಕೆ

    February 25, 2026

    ‘ನ್ಯಗ್ರೋಧ’ ಜಯಲಕ್ಷ್ಮಿ ಹೆಗ್ಡೆ ನಡೆದು ಬಂದ ದಾರಿ ಕೃತಿ ಬಿಡುಗಡೆ ಸಮಾರಂಭ

    February 24, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಪ್ರತಿಭಾನಂದಿನಿ’ | ಫೆಬ್ರವರಿ 25

    February 24, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.