Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಡಾ. ಹಿ.ಶಿ. ರಾಮಚಂದ್ರೇ ಗೌಡ ಮತ್ತು ಡಾ. ಬಿ.ಎನ್. ಸುಮಿತ್ರಾ ಬಾಯಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಗೌರವ ಪ್ರಶಸ್ತಿ’
    Awards

    ಡಾ. ಹಿ.ಶಿ. ರಾಮಚಂದ್ರೇ ಗೌಡ ಮತ್ತು ಡಾ. ಬಿ.ಎನ್. ಸುಮಿತ್ರಾ ಬಾಯಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಗೌರವ ಪ್ರಶಸ್ತಿ’

    May 4, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : 2024ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿಗೆ ಮೈಸೂರಿನ ಹಿರಿಯ ಜನಪದ ವಿದ್ವಾಂಸ ಡಾ. ಹಿ.ಶಿ. ರಾಮಚಂದ್ರೇ ಗೌಡ ಮತ್ತು ಬೆಂಗಳೂರಿನ ಚಿಂತಕಿ ಮತ್ತು ವಿಮರ್ಶಕಿ ಡಾ. ಬಿ.ಎನ್. ಸುಮಿತ್ರಾ ಬಾಯಿಯವರನ್ನು ಆಯ್ಕೆ ಮಾಡಲಾಗಿದೆ. ನಾಡೋಜ ಡಾ. ಮನು ಬಳಿಗಾರ್ ಅವರು  ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಸ್ವೀಕರಿಸದೆ ಆ ಮೊತ್ತವನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿಯೇ ಇರಿಸಿ, ಕನ್ನಡ ನಾಡು-ನುಡಿಗೆ ಮಹತ್ವದ ಸೇವೆ ಸಲ್ಲಿಸಿದವರಿಗೆ ಗೌರವ ಪ್ರಶಸ್ತಿಯನ್ನು ನೀಡಲೆಂದು ಈ ದತ್ತಿಯನ್ನು ಸ್ಥಾಪಿಸಿದ್ದಾರೆ.

    ಹಾಸನ ಜಿಲ್ಲೆಯ ರಂಗನಾಥ ಪುರದಲ್ಲಿ ಜನಿಸಿದ ಡಾ. ಹಿ.ಶಿ. ರಾಮಚಂದ್ರೇ ಗೌಡರು, ಕೇರಳದಲ್ಲಿ ಜನಪದ ಅಧ್ಯಯನವನ್ನು ಮಾಡಿ, ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ‘ಕನ್ನಡ ಜನಪದ ಕಥಾ ವರ್ಗಗಳು’ ಎನ್ನುವ ವಿಷಯದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದಿರುವ ಇವರು ಕರ್ನಾಟಕ ಜನಪದ ಅಕಾಡಮಿ ಅಧ್ಯಕ್ಷರಾಗಿ ಮತ್ತು ಕರ್ನಾಟಕ ಜನಪದ ಸಮಗ್ರ ಸಾಹಿತ್ಯ ಸಂಪುಟದ ಪ್ರಕಟಣಾ ಸಮಿತಿ ಅಧ್ಯಕ್ಷರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಜನಪದ ಸಾಹಿತ್ಯಕ್ಕೆ ಇವರು ನೀಡಿರುವ ಮೌಲಿಕ ಕೊಡುಗೆಗಳನ್ನು ಗಮನಿಸಿ ಈ ಗೌರವ ಪ್ರಶಸ್ತಿಯನ್ನು  ನೀಡಲಾಗುತ್ತಿದೆ.

    ಮೈಸೂರಿನಲ್ಲಿ ಜನಿಸಿದ ಡಾ. ಬಿ.ಎನ್. ಸುಮಿತ್ರಾ ಬಾಯಿಯವರು ಮೈಸೂರು ವಿಶ್ವವಿದ್ಯಾಲಯದಿಂದ ಸಂಸ್ಕೃತ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಜೈನ ಶಾಸ್ತ್ರ ಮತ್ತು ಪ್ರಾಕೃತ ವಿಭಾಗದಲ್ಲಿ ಪಿಎಚ್.ಡಿ ಪದವಿಯನ್ನು ಪಡೆದರು. ಹಾಸನದ ಎ.ವಿ. ಕಾಂತಮ್ಮ ಮತ್ತು ಬೆಂಗಳೂರಿನ ಎ.ಪಿ.ಎಸ್. ವಾಣಿಜ್ಯ ಕಾಲೇಜಿನಲ್ಲಿ ಸಂಸ್ಕೃತ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯನ್ನು ಪಡೆದರು. ಸಮತಾ ವೇದಿಕೆ, ಜಾಗೃತಿ ಮಹಿಳಾ ಅಧ್ಯಯನ ಕೇಂದ್ರ, ಅಚಲ ಬಳಗದ ಮೂಲಕ ಮಹಿಳಾ ಹೋರಾಟದಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡ ಸುಮಿತ್ರಾ ಬಾಯಿಯವರು ಸ್ತ್ರೀವಾದಿ ಚಿಂತನೆಗೆ ಹೊಸ ನೆಲೆಗಳನ್ನು ಕಲ್ಪಿಸಿದರು. ಭರತನ ನಾಟ್ಯ ಶಾಸ್ತ್ರವನ್ನು ಮಹಿಳಾ ನೆಲೆಯಿಂದ ನೋಡಿದ ವಿಶಿಷ್ಟ ಅಧ್ಯಯನವನ್ನು ಅವರು ನಡೆಸಿದ್ದಾರೆ. ಮಹಿಳಾ ಸಾಹಿತ್ಯದ ಅಧ್ಯಯನಕ್ಕೆ ನೀಡಿದ ಮಹತ್ವದ ಕೊಡುಗೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

    ನಾಡೋಜ ಡಾ. ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ  ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ. ಪದ್ಮಿನಿ ನಾಗರಾಜು, ನೇ.ಭ. ರಾಮಲಿಂಗ ಶೆಟ್ಟಿ ಮತ್ತು ದತ್ತಿ ದಾನಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಮತ್ತು ವಿಷಯ ತಜ್ಞರಾಗಿ ಡಾ. ಡಿ.ಕೆ. ಚಿತ್ತಯ್ಯ ಪೂಜಾರ್ ಅವರು  ಭಾಗವಹಿಸಿದ್ದರು. ದತ್ತಿ ಪ್ರಶಸ್ತಿ ಪುರಸ್ಕೃತರಾದ ಡಾ. ಹಿ.ಶಿ. ರಾಮಚಂದ್ರೇ ಗೌಡ ಮತ್ತು ಡಾ. ಬಿ.ಎನ್. ಸುಮಿತ್ರಾ ಬಾಯಿಯವರನ್ನು  ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸುತ್ತದೆ ಮತ್ತು ಅವರ ಸಾಧನೆಯ ಹಾದಿ ಇನ್ನಷ್ಟು ಉಜ್ವಲವಾಗಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರು ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗಿನ ಕವಿ ಸಾಹಿತಿ  ಕೊಟ್ಟುಕತ್ತೀರಾ ಪ್ರಕಾಶ್ ಕಾರ್ಯಪ್ಪ
    Next Article ‘ರಜಾಮಜಾ’ ಬೇಸಿಗೆ ಶಿಬಿರದ ಸಮಾರೋಪ ಸಡಗರ | ಮೇ 5  
    roovari

    Add Comment Cancel Reply


    Related Posts

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಡಾ. ಪುರುಷೋತ್ತಮ್ ಬಿಳಿಮಲೆ ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’

    June 14, 2025

    ಕರುನಾಡಿನ ಹದಿನೈದು ವೀರ ವನಿತೆಯರ ಬಗ್ಗೆ ಕವನ ಆಹ್ವಾನ | ಕೊನೆಯ ದಿನಾಂಕ ಜುಲೈ 15

    June 14, 2025

    ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಸಪ್ತಾಹ ಹಾಗೂ ಅಷ್ಟಾವಧಾನ | ಜೂನ್ 15 ರಿಂದ 21

    June 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.