ಬೆಂಗಳೂರು: 2023ರ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ ತಿಂಗಳ 21ನೆಯ ತಾರೀಕು ಕೊನೆಯ ದಿನವಾಗಿದೆ. 2023ರ ಸೆಪ್ಟೆಂಬರ್ ತಿಂಗಳ 15ರವರೆಗೆ ದಂಡ ಶುಲ್ಕ ರೂಪಾಯಿ 50-೦೦ ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿಸಲ್ಲಿಸಲು ಅವಕಾಶವಿರುತ್ತದೆ.
ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25ರೂಪಾಯಿ ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿರುವ ಮಾರಾಟ ಮಳಿಗೆಯಲ್ಲಿ ದಿನಾಂಕ 01-07-2023ರಿಂದ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ‍್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ.
ಅರ್ಜಿನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಮೂಲಕ ಪಡೆದು ಕೊಳ್ಳಬಹುದು. ಅಂತರ್ಜಾಲದ ಮೂಲಕ ಅರ್ಜಿ ನಮೂನೆ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25ರೂಪಾಯಿಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- 560018, ದೂರವಾಣಿ ಸಂಖ್ಯೆ :080-26612991, 22423867, 26623584 ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ.