ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಹಾಗೂ ಸುವರ್ಣ ಕರ್ನಾಟಕ -50ರ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಂಡಿದೆ. ಆಕರ್ಷಕ ರಿಯಾಯತಿಯ ದರದಲ್ಲಿ ಪರಿಷತ್ತಿನ ಪ್ರಕಟಣೆಯ ಪುಸ್ತಕಗಳನ್ನು ಮಾರಾಟಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ನವೆಂಬರ್ 1 ರಿಂದ 30ರವರೆಗೆ ಪ್ರತಿದಿನ ಬೆಳಗ್ಗೆ 9.00 ಗಂಟೆಯಿಂದ ಸಂಜೆ ಘಂಟೆ 7.00ರ ವರೆಗೆ ರಜಾ ದಿನಗಳಲ್ಲಿಯೂ ನಗರದ ಚಾಮರಾಜ ಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿದೆ. ಶೇ.10 ರಿಂದ ಶೇ.75ರಷ್ಟು ರಿಯಾಯಿತಿ ದರದಲ್ಲಿ ಅಮೂಲ್ಯವಾದ ಪುಸ್ತಕಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಇತಿಹಾಸದಲ್ಲಿ ತೀರಾ ಅಪರೂಪವೆನಿಸಿದ ಪುಸ್ತಕಗಳ ಪ್ರಕಟಣೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಾ ಬಂದಿದ್ದು, ಪರಿಷತ್ತು ಪ್ರಕಟಿಸಿರುವ ಎಲ್ಲಾ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಾಗಿವೆ. ಕನ್ನಡ ರತ್ನಕೋಶ ಮತ್ತು ಸಂಕ್ಷಿಪ್ತ ಕನ್ನಡ ನಿಘಂಟು, ಸಂಕ್ಷಿಪ್ತ ಕನ್ನಡ ಇಂಗ್ಲಿಷ್ ನಿಘಂಟು, ಬೃಹತ್ ಕನ್ನಡ-ಕನ್ನಡ ನಿಘಂಟು, ಪರೀಕ್ಷೆ ಪುಸ್ತಕಗಳು, ಗದ್ಯಾನುವಾದ, ಶತಮಾನೋತ್ಸವ ಮಾಲಿಕೆ ಪುಸ್ತಕಗಳು, ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆ ಎಲ್ಲಾ ಸಂಪುಟಗಳು, ಮಹಿಳಾ ಸಾಹಿತ್ಯ ಸಂಪುಟಗಳು, ದಲಿತ ಸಾಹಿತ್ಯ ಸಂಪುಟಗಳು, ಜೀವನ ಚರಿತ್ರೆಗಳು, ಪಿ.ಹೆಚ್.ಡಿ ಪುಸ್ತಕಗಳು, ಜಿಲ್ಲಾ ಸಾಹಿತ್ಯ ಸಮ್ಮೇಳನದ ಪುಸ್ತಕಗಳು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸ್ಮರಣಿಕೆ ಸಂಚಿಕೆಗಳು ಹಾಗೂ ಇತರೆ ಪ್ರಕಟಣೆಗಳು ಮಾರಾಟಕ್ಕೆ ಲಭ್ಯವಿರುತ್ತದೆ.
Subscribe to Updates
Get the latest creative news from FooBar about art, design and business.
ರಾಜ್ಯೋತ್ಸವ ಹಾಗೂ ಸುವರ್ಣ ಕರ್ನಾಟಕ -50ರ ಅಂಗವಾಗಿ ನವೆಂಬರ್ ತಿಂಗಳಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪುಸ್ತಕ ಮಾರಾಟ
No Comments1 Min Read
Previous Articleಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಉತ್ತಂಗಿ ಚೆನ್ನಪ್ಪನವರ ಜನ್ಮದಿನಾಚಾರಣೆ