Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಸಾಪ | ಕಂಠೀರವ ನರಸಿಂಹರಾಜ ಒಡೆಯರ್ ಅವರ 135 ನೆಯ ಜನ್ಮ ದಿನಾಚರಣೆ
    Literature

    ಕಸಾಪ | ಕಂಠೀರವ ನರಸಿಂಹರಾಜ ಒಡೆಯರ್ ಅವರ 135 ನೆಯ ಜನ್ಮ ದಿನಾಚರಣೆ

    June 6, 2023Updated:August 19, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ಕಂಠೀರವ ನರಸಿಂಹರಾಜ ಒಡೆಯರ್ ಅವರ 135 ನೆಯ ಜನ್ಮ ದಿನಾಚರಣೆಯು ದಿನಾಂಕ 05-06-2023 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಪಂಪ ಸಭಾಗಂಣದಲ್ಲಿ ಪುಷ್ಪನಮನ ಕಾರ್ಯಕ್ರಮದೊಂದಿಗೆ ನೆರವೇರಿತು.

    “ ಕಂಠೀರವ ನರಸಿಂಹರಾಜ ಒಡೆಯರ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಕಚೇರಿಯನ್ನು ಹಾಗೂ ಸೆಂಟ್ರಲ್‌ ಕಾಲೇಜಿನಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿದವರು, ಕನ್ನಡ ಸಾಹಿತ್ಯ ಪರಿಷತ್ತಿಗೆ ಸತತ ಹದಿನಾರು ವರ್ಷಗಳ ಕಾಲ ಅಧ್ಯಕ್ಷರಾಗಿ ನಿರಂತರ ಕನ್ನಡ ಸೇವೆ ಮಾಡಿದ ಮಹಾನ್‌ ಚೇತನವಾಗಿದ್ದರು. ಕನ್ನಡದ ಧೀಮಂತ ಸಾಹಿತಿ ಡಿ.ವಿ.ಜಿ ಅವರನ್ನು ಪರಿಷತ್ತಿಗೆ ಕರೆದುಕೊಂಡು ಬಂದು ಉಪಾಧ್ಯಕ್ಷರನ್ನಾಗಿ ಮಾಡಿ ಪರಿಷತ್ತು ಬೆಳೆಯವುದಕ್ಕೆ ಮೂಲ ಕಾರಣರಾದವರು. ಕಂಠೀರವ ನರಸಿಂಹರಾಜ ಒಡೆಯರಿಗೆ ಸಂಸ್ಥಾನದ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿ ಕಾರ್ಯಗಳಲ್ಲಿ ವಿಶೇಷ ಆಸಕ್ತಿಯಿತ್ತು. ಇವರು ಸಂಸ್ಥಾನದ ಸ್ಕೌಟ್ ಚಳವಳಿಯ ಮುಖ್ಯರಾಗಿದ್ದುದಲ್ಲದೆ ರೆಡ್‌ ಕ್ರಾಸ್‌ ಸಂಸ್ಥೆಯ ಸದಸ್ಯರೂ ಆಗಿದ್ದರು. ಗರ್ಭಿಣಿ ಮತ್ತು ಶಿಶು ಸಂರಕ್ಷಣೆಯ ಕಾರ್ಯದಲ್ಲಿ ವಿಶೇಷ ಆಸ್ಥೆ ವಹಿಸಿದ್ದು, ಅದಕ್ಕಾಗಿ ಅನೇಕ ಚಿಕಿತ್ಸಾಲಯಗಳ ಸ್ಥಾಪನೆ ಮಾಡಿದರು. ವಿಶೇಷ ಚೇತನರ ಶಿಕ್ಷಣಕ್ಕೆ ಅವರು ವಿಶೇಷ ಪ್ರೋತ್ಸಾಹ ನೀಡಿದ್ದರು. ದೀನದಲಿತರಲ್ಲಿ ಇವರು ತೋರಿಸುತ್ತಿದ್ದ ಕಾಳಜಿ ಇಂದಿನ ಕಾಲಮಾನದಲ್ಲಿ ನಮ್ಮೆಲ್ಲರಿಗೂ ಮಾರ್ಗದರ್ಶನ. ಸಂಗೀತ ಮತ್ತು ಸಾಹಿತ್ಯದಲ್ಲಿ ಅಭಿರುಚಿ ಹೊಂದಿದ್ದ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕಾಧ್ಯಕ್ಷರೂ ಆಗಿದ್ದರು. ಬೆಂಗಳೂರಿನಲ್ಲಿರುವ ಮಿಥಿಕ್ ಸೊಸೈಟಿಯ ಮುಖ್ಯ ಉಪಪೋಷಕರೂ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುಲಾಧಿಪತಿಗಳೂ ಆಗಿದ್ದರು. ಕಂಠೀರವ ನರಸಿಂಹ ರಾಜ ನಾಮಾಂಕಿತ ಕಟ್ಟಡಗಳೂ, ರಸ್ತೆಗಳೂ, ಬಡಾವಣೆಗಳೂ, ಗ್ರಾಮಗಳೂ, ಹಳೆಯ ಮೈಸೂರು ಭಾಗದಲ್ಲಿ ಸಾಕಷ್ಟು ಕಡೆಗಳಲ್ಲಿ ಇವೆ. ಬೆಂಗಳೂರಿನಲ್ಲಿ ನರಸಿಂಹ ರಾಜ ಕಾಲೋನಿ, ಕಂಠೀರವ ಸ್ಟೇಡಿಯಂ ಮತ್ತು ಸ್ಟುಡಿಯೋಗಳು ಇವರ ಹೆಸರಿನಲ್ಲಿ ಸ್ಥಾಪನೆಯಾಗಿವೆ ” ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ನೆನಪಿಸಿಕೊಂಡರು.
    ಕಂಠೀರವ ನರಸಿಂಹ ರಾಜ ಒಡೆಯರ್‌ ಅವರ ಕೊಡುಗೆಗಳ ಕುರಿತು ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕರಾದ ಪ್ರೊ.ಎನ್.ಎಸ್.ಶ್ರೀಧರಮೂರ್ತಿಯವರು “ ಕನ್ನಡ ಸಾಹಿತ್ಯ ಪರಿಷತ್ತಿಗೆ ಅನೇಕ ಪ್ರಮುಖ ಬರಹಗಾರರು ಅದರಲ್ಲಿಯೂ ಡಿ.ವಿ.ಜಿಯವರು ಬರಲು ಕಂಠೀರವ ನರಸಿಂಹ ರಾಜ ಒಡೆಯರ್‌ ಅವರು ಕಾರಣಕರ್ತರು. ಕರ್ನಾಟಕದ ಬೇರೆ ಬೇರೆ ಭಾಗದಲ್ಲಿದ್ದ ಕನ್ನಡ ಸಂಘಗಳ ನಾಲ್ಕು ಸಮ್ಮೇಳನಗಳನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಏರ್ಪಡಿಸಿ ಸಾಹಿತಿಗಳು ಒಂದಾಗಲು ಅವರು ಕಾರಣಕರ್ತರಾಗಿದ್ದರು. ಟಿ.ಪಿ.ಕೈಲಾಸಂ ಅವರು ಮೃಚ್ಛಕಟಿಕ ಮೂಕಿ ಚಿತ್ರ ನಿರ್ಮಿಸಲು, ಕೆ.ಅಶ್ವತ್ಥಮ್ಮನವರು ಗಾಯಕಿಯಾಗಿ ಬೆಳೆಯಲು, ಪಿಟೀಲ್‌ ಚೌಡಯ್ಯ, ಬಿಡಾರಂ ಕೃಷ್ಣಪ್ಪ, ವೀಣೆ ಶೇಷಣ್ಣ ಮೊದಲಾದವರು ಸಂಗೀತ ಕ್ಷೇತ್ರದಲ್ಲಿ ಬೆಳಗಲು ಅವರು ಕಾರಣಕರ್ತರಾದರು ” ಎಂದು ತಿಳಿಸಿದರು.
    ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ನೇ.ಭ.ರಾಮಲಿಂಗ ಶೆಟ್ಟಿ, ಡಾ.ಪದ್ಮಿನಿ ನಾಗರಾಜು ಗೌರವ ಕೋಶಾಧ್ಯಕ್ಷರಾದ ಡಾ. ಬಿ. ಎಮ್‌. ಪಟೇಲ್‌ ಪಾಂಡು, ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಸಿಬ್ಬಂದಿಗಳು ಹಾಜರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಮುಸ್ಲಿಂ ಸಾಹಿತ್ಯ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
    Next Article ‘ಸ್ವರುಣ್ ಸ್ಮರಣಾಂಜಲಿ 2023’ | ಜೂನ್ 9
    roovari

    Add Comment Cancel Reply


    Related Posts

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಕೊಂಕಣಿ ಲೇಖಕಿಯರ ಸಾಹಿತ್ಯ ಪ್ರಸ್ತುತಿ ‘ಅಸ್ಮಿತಾ’ ವಿಶೇಷ ಕಾರ್ಯಕ್ರಮ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.