ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ಸೂರಜ್ ಪದವಿ ಪೂರ್ವ ಕಾಲೇಜು ಮುಡಿಪು ಕುರ್ನಾಡು ಸಹಯೋಗದೊಂದಿಗೆ ದಿನಾಂಕ 25-05-2023ರಂದು ಮಂಗಳೂರು ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಕವನ ಸ್ಪರ್ಧೆ ಕಾರ್ಯಕ್ರಮ’ವು ಸೂರಜ್ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕೀರ್ತನ ಎಂ — ಪ್ರಥಮ
ಪಾತಿಮಾತುಲ್ ಆಶಿಕಾ – ದ್ವಿತೀಯ
ಪಾತಿಮಾತುಲ್ ಅಪೀಪಾ — ತೃತೀಯ
ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಬಿ.ಶೆಟ್ಟಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಂಜುನಾಥ ಎಸ್. ರೇವಣ್ಕರ್ ಇವರ ಅಧ್ಯಕ್ಷತೆಯಲ್ಲಿ, ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ 2021 ಇದರ ದತ್ತಿ ಕೊಡುಗೆಯಲ್ಲಿ ಈ ಕಾರ್ಯಕ್ರಮ ನಡೆಯಿತು. ಸುಮಾರು 35 ಮಂದಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಎಲ್ಲರಿಗೂ ಅಭಿನಂದನಾ ಪತ್ರ ನೀಡಲಾಗಿದೆ. ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ವಿಜೇತರಾದವರಿಗೆ ಪ್ರಮಾಣ ಪತ್ರದೊಂದಿಗೆ ನಗದು ಬಹುಮಾನವನ್ನು ನೀಡಲಾಗಿದೆ. ಈ ಕವನ ರಚನಾ ಸ್ಪರ್ಧೆಯ ನಿರೂಪಣೆಯನ್ನು ಕಾಲೇಜಿನ ಕನ್ನಡ ಉಪನ್ಯಾಸಕರಾದ ಶ್ರೀ ಅರುಣ್ ಕುಮಾರ್ ನಿರ್ವಹಿಸಿದರು.
ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕೋಶಾಧಿಕಾರಿ ಶ್ರೀ ಎನ್.ಸುಭ್ರಾಯ ಭಟ್ ಉಪನ್ಯಾಸಗೈದರು.
ಮಂಗಳೂರು ತಾಲೂಕು ಘಟಕದ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಶ್ರೀ ಗಣೇಶ್ ಪ್ರಸಾದ್ ಜೀ ಸಭಾ ಕಾರ್ಯಕ್ರಮವನ್ನು ನಿರೂಪಿಸಿ, ಗೌರವ ಕಾರ್ಯದರ್ಶಿ ಡಾ. ಮುರಲೀ ಮೋಹನ್ ಚೂಂತಾರು ಸ್ವಾಗತಿಸಿ, ಸೂರಜ್ ಕಾಲೇಜು ಪ್ರಾಂಶುಪಾಲರಾದ ಡಾಲ್ಫಿ ಸಿಕ್ವೇರಾ ವಂದಿಸಿದರು.