Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ವಿಶೇಷ ಲೇಖನ – ಗ್ರಂಥಾಲಯ ವಿಜ್ಞಾನದ ಸಾಧಕ ಡಾ. ಎಸ್. ಆರ್. ಗುಂಜಾಳ

    June 25, 2025

    ‘ಕರ್ನಾಟಕದ ಶತಾಯುಷಿಗಳು’ ಕೃತಿ ಲೋಕಾರ್ಪಣೆ ಸಮಾರಂಭ | ಜೂನ್ 25

    June 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬಸ್ ನಿಲ್ದಾಣದಲ್ಲಿ ಕ.ಸಾ.ಪ. ‘ಮನೆಯೇ ಗ್ರಂಥಾಲಯ’ ಅಭಿಯಾನ
    Literature

    ಬಸ್ ನಿಲ್ದಾಣದಲ್ಲಿ ಕ.ಸಾ.ಪ. ‘ಮನೆಯೇ ಗ್ರಂಥಾಲಯ’ ಅಭಿಯಾನ

    August 1, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟಕಲ್ಲು : ನಾಗರಿಕ ಸಮಿತಿ ಬಂಟಕಲ್ಲು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹಾಗೂ ಕಾಪು ತಾಲೂಕು ಘಟಕದ ವತಿಯಿಂದ ಆಯೋಜಿಸಿರುವ ಮನೆಯೇ ಗ್ರಂಥಾಲಯ ಅಭಿಯಾನದ ಅಂಗವಾಗಿ ಬಂಟಕಲ್ಲಿನ ಬಸ್ ನಿಲ್ದಾಣದಲ್ಲಿ ನಿರ್ಮಾಣಗೊಂಡ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷರಾದ ಕೆ.ಆರ್. ಪಾಟ್ಕರ್ ಇವರಿಗೆ ಉಡುಪಿ ತಾಲೂಕು ಕ.ಸಾ.ಪ. ಅಧ್ಯಕ್ಷರಾದ ಶ್ರೀ ರವಿರಾಜ್ ಎಚ್.ಪಿ. ಇವರು ದಿನಾಂಕ 31 ಜುಲೈ 2024ರಂದು ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಶ್ರೀ ರವಿರಾಜ್ ಎಚ್.ಪಿ. ಮಾತನಾಡುತ್ತಾ “ಉಡುಪಿ ತಾಲೂಕಿನಲ್ಲಿ ಈಗಾಗಲೇ 65 ಗ್ರಂಥಾಲಯಗಳು ಮನೆ, ಅಂಗಡಿ, ಆಸ್ಪತ್ರೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣಗೊಂಡಿದೆ. 100 ದಿನಗಳಲ್ಲಿ ನೂರು ಗ್ರಂಥಾಲಯ ನಿರ್ಮಾಣಗೊಳ್ಳುವ ಆಶಯವನ್ನು ಹೊಂದಿದ್ದು, ಕ.ಸಾ.ಪ. ಕಾಪು ತಾಲೂಕು ಘಟಕ ಈ ಅಭಿಯಾನದಲ್ಲಿ ನಮ್ಮೊಂದಿಗೆ ಸಹಕರಿಸುತ್ತಿದೆ” ಎಂದರು.

    ಈ ಸಂದರ್ಭದಲ್ಲಿ ಕ.ಸಾ.ಪ. ಕಾಪು ತಾಲೂಕು ಘಟಕದ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೊಶಾಧಿಕಾರಿ ಜಗದೀಶ ಆಚಾರ್ಯ, ಸದಸ್ಯರಾದ ವೈಲೆಟ್ ಕಾಸ್ತಲಿನೂ, ಉಮೇಶ್ ರಾವ್, ಡೆನೀಸ್ ಡಿ’ಸೋಜ, ವಿನ್ಸಂಟ್ ಕಾಸ್ತಲಿನೂ, ಅಶೋಕ, ಹರೀಶ್, ವಿರೇಂದ್ರ ಪಾಟ್ಕರ್, ವಿಶ್ವನಾದ್ ಬಾಂದೇಲ್ಕರ್, ಸುನೀಲ್, ಕ.ಸಾ.ಪ. ಉಡುಪಿ ತಾಲೂಕು ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಮನೆಯೇ ಗ್ರಂಥಾಲಯ ಇದರ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು, ದೀಪಾ ಚಂದ್ರಕಾಂತ್ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಅಭಿನಯಿಸುವ ‘ನಾಯಿ ಮರಿ’ ನಾಟಕ ಪ್ರದರ್ಶನ | ಆಗಸ್ಟ್ 3
    Next Article ಶ್ರೀ ಎಡನೀರು ಮಠದಲ್ಲಿ ‘ವೀರ ಶತಕಂಠ’ ಯಕ್ಷಗಾನ ಪ್ರದರ್ಶನ | ಆಗಸ್ಟ್ 2
    roovari

    Comments are closed.

    Related Posts

    ವಿಶೇಷ ಲೇಖನ – ಅನನ್ಯ ರಂಗಕರ್ಮಿ ಜಿ. ಕೆ. ಐತಾಳ್

    June 25, 2025

    ಹಿರಿಯ ಸಾಹಿತಿ ಪ್ರಭಾ ಮಟಮಾರಿ ನಿಧನ

    June 24, 2025

    ಕ.ಸಾ.ಪ.ದ ಬೆಳ್ತಂಗಡಿ ತಾಲೂಕು ಘಟಕದಿಂದ ಉಪನ್ಯಾಸಮಾಲೆ | ಜೂನ್ 26

    June 24, 2025

    ಮಂಗಳೂರಿನಲ್ಲಿ ಉದ್ಘಾಟನೆಗೊಂಡ ‘ಮನೆ ಮನೆ ಕನ್ನಡ ಜಾಗೃತಿ ಅಭಿಯಾನ’

    June 24, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.