ಕಾಸರಗೋಡು : ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಸಮಿತಿಯ ಜಂಟಿ ಆಶ್ರಯದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಸಮಿತಿಯ ಸಹಕಾರದಲ್ಲಿ ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ಕ್ಷೇತ್ರದಲ್ಲಿ ದಿನಾಂಕ 27 ಸೆಪ್ಟೆಂಬರ್ 2025ರಂದು ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದ ಕಾಸರಗೋಡು ದಸರಾ ಕವಿಗೋಷ್ಠಿ ನಡೆಯಿತು.
ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದ ಹಿರಿಯ ಸಾಹಿತಿ ಕೊಳ್ಚಪ್ಪೆ ಗೋವಿಂದ ಭಟ್ “ಕಾಸರಗೋಡಿನಲ್ಲಿ ಕನ್ನಡ ಭಾಷೆ ಉಳಿಯಬೇಕಾದರೆ ಭವಿಷ್ಯಕ್ಕಾಗಿ ಕನ್ನಡ ಜಾಗೃತಿ ಆಗಲೇಬೇಕು. ಎಳೆಯ ಮಕ್ಕಳಲ್ಲಿ ಕನ್ನಡ ಪರವಾದ ಮನೋಭಾವ ಬೆಳೆಸಬೇಕು” ಎಂದು ಹೇಳಿದರು. ಗಝಲ್ ಕವಿ ಡಾ. ಸುರೇಶ್ ನೆಗಳಗುಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ “ನವರಾತ್ರಿಯ ಒಂಭತ್ತು ಬಣ್ಣಗಳಲ್ಲಿ ಸಂತೋಷ, ಶಾಂತಿ, ಪ್ರೀತಿ, ಆಧ್ಯಾತ್ಮಿಕತೆಯಿಂದ ನಾಡಹಬ್ಬವಾಗಿದೆ. ಇದರಿಂದ ಸಮಾಜವು ಸುಭಿಕ್ಷವಾಗುತ್ತದೆ” ಎಂದು ಹೇಳಿದರು.
ಕವಿಗೋಷ್ಠಿಯ ಸಂದರ್ಭದಲ್ಲಿ ಮಂಗಳೂರಿನ ಮಂಗಳಾ ಆಸ್ಪತ್ರೆಯ ಮೂಲವ್ಯಾಧಿ ಶಸ್ತ್ರ ಚಿಕಿತ್ಸಕ, ಕಣಚೂರ್ ಆಯುರ್ವೇದ ಕಾಲೇಜಿನ ವೈದ್ಯಕೀಯ ಮಾರ್ಗದರ್ಶಕ ಹಾಗೂ ಬರಹಗಾರ ಡಾ. ಸುರೇಶ ನೆಗಳಗುಳಿ ಇವರನ್ನು ‘ಕಾಸರಗೋಡು ದಸರಾ ಕವಿಸಾಧಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ವೇಳೆ ನೆಗಳಗುಳಿ ಸರ್ವಾಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ ಸುಮಾರು ನಲುವತ್ತು ಕವಿಗಳು ಭಕ್ತಿ ಪ್ರಧಾನ ಸ್ವರಚಿತ ಕವನಗಳನ್ನು ವಾಚಿಸಿದರು.
ಮುಖ್ಯ ಅತಿಥಿಗಳಾಗಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾದ ಪ್ರಾಧ್ಯಾಪಕ ಜಯಾನಂದ ಪೆರಾಜೆ, ಸಂಚಾಲಕಿ ಡಾ. ಶಾಂತಾ ಪುತ್ತೂರು, ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ರೇಖಾ ಸುದೇಶ್ ರಾವ್, ಕನ್ನಡ ಭವನದ ಉಡುಪಿ ಜಿಲ್ಲಾಧ್ಯಕ್ಷೆ ಶೋಭಾ ದಿನೇಶ್ ಉದ್ಯಾವರ, ಕನ್ನಡ ಭವನ ಪ್ರಕಾಶಕಿ ಸಂಧ್ಯಾರಾಣಿ ಟೀಚರ್, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ದೇವರಾಜ ಆಚಾರ್ಯ ಸೂರಂಬೈಲ್ ಭಾಗವಹಿಸಿದ್ದರು. ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರೇಖಾ ರೋಶನ್ ಸ್ವಾಗತಿಸಿ, ವಸಂತ ಕೆರೆಮನೆ ವಂದಿಸಿ, ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕೆ. ನರಸಿಂಹ ಭಟ್ ಏತಡ್ಕ, ಪ್ರಭಾವತಿ ಕೆದಿಲಾಯ ಪುಂಡೂರು, ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು, ಶಶಿಕಲಾ ಟೀಚರ್ ಕುಂಬ್ಳೆ, ಆದ್ಯಂತ್ ಅಡೂರು, ಡಾ. ಸುರೇಶ್ ನೆಗಳಗುಳಿ, ಲಕ್ಷ್ಮಿ ವಿ. ಭಟ್, ಚಿತ್ರಕಲಾ ದೇವರಾಜ ಆಚಾರ್ಯ ಸೂರಂಬೈಲ್, ಕೆ.ಎಸ್ .ಮಂಜುನಾಥ ಹರಿಹರಪುರ, ರೇಖಾ ಸುದೇಶ್ ರಾವ್, ಶೋಭಾ ದಿನೇಶ್ ಉದ್ಯಾವರ ಇವರಿಗೆ ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ-2025 ಪ್ರದಾನ ಮಾಡಲಾಯಿತು. ಭಕ್ತಿಪ್ರಧಾನ ಕವಿಗೋಷ್ಠಿಯಲ್ಲಿ ಶ್ರೀಹರಿ ಭಟ್ ಪೆಲ್ತಾಜೆ, ಶ್ವೇತಾ ಡಿ. ಬಂಟ್ವಾಳ, ಕುಶಿ ಬಡಗಬೆಳ್ಳೂರು ಬಂಟ್ವಾಳ, ಸವಿತಾ ಕರ್ಕೇರ ಕಾವೂರು, ಮಲ್ಲಿಕಾ ಬಿ.ಎಸ್. ರೆಂಜತಮೂಲೆ ಪೆರ್ಲ, ಎಂ.ಎ. ಮುಸ್ತಫಾ ಬೆಳ್ಳಾರೆ, ಗಿರೀಶ್ ಪೆರಿಯಡ್ಕ ಉಪ್ಪಿನಂಗಡಿ, ಸುಜಿತ್ ಕುಮಾರ ಬೇಕೂರು, ರಾಧಾಕೃಷ್ಣ ಭಟ್ ಕುರುಮುಜ್ಜಿ, ಜ್ಯೋತ್ಸ್ನಾ ಕಡಂದೇಲು, ನಿವೇದಿತಾ ಪ್ರಶಾಂತ್ ಸಹಿತ 25ಕ್ಕೂ ಮಿಕ್ಕಿದ ಕವಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಪುರುಷೋತ್ತಮ ಭಟ್ ಪುದುಕೋಳಿ, ಗೀತಾ ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದರು.