Subscribe to Updates

    Get the latest creative news from FooBar about art, design and business.

    What's Hot

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

    May 28, 2025

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚನೆ
    Literature

    ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚನೆ

    January 31, 2025No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು ಹಾಗೂ ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇವರ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 27 ಮಾರ್ಚ್ 2025 ಗುರುವಾರದಂದು ಬೆಳಿಗ್ಗೆ ಗಂಟೆ 9-00ರಿಂದ ರಾತ್ರಿ 9-00ರವರೆಗೆ ನಡೆಯುವ ಒಂದು ದಿನದ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನ -2025, ಕರ್ನಾಟಕ ಗಡಿನಾಡ ಉತ್ಸವ, ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುವ ಉದ್ದೇಶದಿಂದ ವಿಶೇಷ ಸಭೆಯನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ ದಿನಾಂಕ 28 ಜನವರಿ 2025ರಂದು ಕರೆಯಲಾಯಿತು.

    ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಕವಿ, ಸಂಘಟಕ ಹರೀಶ್ ಸುಲಾಯ ಒಡ್ಡಂಬೆಟ್ಟು ಇವರನ್ನು ಆಯ್ಕೆ ಮಾಡಲಾಯಿತು. ಕಾಸರಗೋಡು ನಗರ ಸಭಾ ಕೌನ್ಸಿಲರ್ ಶ್ರೀಮತಿ ಶಾರದಾ ಕೆ. ಸಮ್ಮೇಳನ ಲಾಂಛನವನ್ನು ಅನಾವರಣಗೊಳಿಸಿ ಸಮ್ಮೇಳನದ ಚಟುವಟಿಕೆಗೆ ಚಾಲನೆ ನೀಡಿದರು. ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಕಾಸರಗೋಡು, ಮಂಜೇಶ್ವರ, ಹೊಸದುರ್ಗ ತಾಲೂಕು ಘಟಕದ ಅಧ್ಯಕ್ಷರನ್ನು ಶೀಘ್ರದಲ್ಲೇ ನೇಮಕ ಮಾಡಲು ತೀರ್ಮಾನಿಸಲಾಯಿತು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ 25ನೇ ಬೆಳ್ಳಿ ಹಬ್ಬ ವರ್ಷಾಚರಣೆಯ ಸಂಭ್ರಮದ ನೆನಪಿಗಾಗಿ ಪ್ರಥಮ ಕೇರಳ ರಾಜ್ಯ ಚುಟುಕು ಸಾಹಿತ್ಯ ಸಮ್ಮೇಳನವನ್ನು ಏರ್ಪಡಿಸಲಾಗಿದೆ.

    ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಮತ್ತು ರಾಜ್ಯಮಟ್ಟದ ವಿದ್ಯಾರ್ಥಿ ಚುಟುಕು ಕವಿಗೋಷ್ಠಿಯಲ್ಲಿ ಒಟ್ಟು 100 ಮಂದಿ ಚುಟುಕು ಕವಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗುವುದು. ರಾಜ್ಯ ಮಟ್ಟದ ಚುಟುಕು ಕಥಾ ಗೋಷ್ಠಿಯಲ್ಲಿ 25 ಮಂದಿಗೆ ಅವಕಾಶವಿದೆ. ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೆಂಗಳೂರು ಜಿಲ್ಲೆಗಳಿಂದ ಕವಿಗಳು ಭಾಗವಹಿಸಲಿದ್ದಾರೆ. ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇದರ ನೇತೃತ್ವದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ, ಬೆಂಗಳೂರು ಕನ್ನಡ ನಾಟಕೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನದಲ್ಲಿ ಮೂರು ಐತಿಹಾಸಿಕ, ಚಾರಿತ್ರಿಕ, ಸಾಮಾಜಿಕ, ಕನ್ನಡ ನಾಟಕಗಳನ್ನು ಪ್ರದರ್ಶಿಸಲಾಗುವುದು. ಬೆಂಗಳೂರಿನ ವಿವಿಧ ಸಂಘ ಸಂಸ್ಥೆಗಳ ಸುಮಾರು 30 ಮಂದಿ ಪ್ರಸಿದ್ಧ, ಹಿರಿಯ, ಯುವ ಮಹಿಳಾ ಕಲಾವಿದರಿಂದ ನಾಟಕ, ಭರತನಾಟ್ಯ, ನೃತ್ಯ ರೂಪಕ, ಜಾನಪದ ನೃತ್ಯ, ಸುಗಮ ಸಂಗೀತ ಗಾಯನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 100 ಮಂದಿ ಕಲಾವಿದರು ಭಾಗವಹಿಸಲಿದ್ದಾರೆ.


    ವಿವಿಧ ಕ್ಷೇತ್ರದ ಐದು ಮಂದಿ ಸಾಧಕರನ್ನು ಗುರುತಿಸಿ ‘ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಗೌರವ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು. ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮ ಕ್ಷೇತ್ರದ ಐದು ಮಂದಿ ಸಾಧಕರನ್ನು ಗುರುತಿಸಿ ‘ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಮಾಧ್ಯಮ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು. ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಸ್ಥಾಪಕ ರಾಜ್ಯ ಪ್ರದಾನ ಸಂಚಾಲಕ ಡಾ. ಎಂ.ಜಿ.ಆರ್. ಅರಸ್ ಇವರಿಗೆ ಮತ್ತು ವಿ.ಕೆ.ಎಂ. ಕಲಾವಿದರು (ರಿ.) ಬೆಂಗಳೂರು ಇದರ ಸ್ಥಾಪಕ ಪ್ರದಾನ ಕಾರ್ಯದರ್ಶಿ ಸಿ.ಎಂ. ತಿಮ್ಮಯ್ಯರವರಿಗೆ ಜೀವಮಾನದ ಸಾಧನೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಿವರಾಮ ಕಾಸರಗೋಡು ಅಧ್ಯಕ್ಷರು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು ಕನ್ನಡ ಗ್ರಾಮ, ಕನ್ನಡ ಗ್ರಾಮ ರಸ್ತೆ ಕಾಸರಗೋಡು -671121. ಮೊಬೈಲ್ : 9448572016, 9901951965.

    Literature
    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು | ಫೆಬ್ರವರಿ 7, 8 ಮತ್ತು 9
    Next Article ಉಡುಪಿ ಅಂಬಲ್ಪಾಡಿ ದೇವಸ್ಥಾನದಲ್ಲಿ ದಾಸವರೇಣ್ಯ ಪುರಂದರದಾಸರ ಆರಾಧನೆಯ ಮಹೋತ್ಸವ
    roovari

    Add Comment Cancel Reply


    Related Posts

    ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಡಾ. ಪ್ರಜ್ಞಾ ಮತ್ತಿಹಳ್ಳಿ ಇವರ ‘ಬೆಳದಿಂಗಳ ಸೋನೆಮಳೆ’ ಕವನ ಸಂಕಲನ ಆಯ್ಕೆ

    May 28, 2025

    ಕುಂದಾಪುರದಲ್ಲಿ ‘ಅರಿವಿನ ಬೆಳಕು’ ಉಪನ್ಯಾಸ ಮಾಲೆ-5 ಮತ್ತು ಕೃತಿ ಲೋಕಾರ್ಪಣೆ | ಮೇ 29

    May 28, 2025

    ಕಾವೇರಿ ಕಾಲೇಜಿನಲ್ಲಿ ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ದತ್ತಿನಿಧಿ ಕಾರ್ಯಕ್ರಮ | ಮೇ 31

    May 28, 2025

    ಉತ್ತರ ಕರ್ನಾಟಕ ಲೇಖಕಿಯರ ಸಂಘದ ಪ್ರಶಸ್ತಿ ಪ್ರಕಟ

    May 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.