ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತ ಮಲ್ಲಪ್ಪ ಪ್ರಥಮ ದರ್ಜೆ ಕಾಲೇಜು ಕೊಡ್ಲಿಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ‘ಆರೋಡ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ. ಮಾಗನೂರು ಬಸಪ್ಪ ದತ್ತಿ ಕಾರ್ಯಕ್ರಮದಂತೆ ಶರಣ ಸಂಸ್ಕೃತಿಯ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕೊಡ್ಲಿಪೇಟೆಯ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 26-08-2023ರಂದು ಬೆಳಿಗ್ಗೆ 11:00 ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಂ.ಪಿ. ಕೇಶವ ಕಾಮತ್ ಇವರು ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ಶ್ರೀ ಕ್ಷೇತ್ರ ಕಿರಿಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಸದಾಶಿವ ಸ್ವಾಮೀಜಿಗಳು ನೀಡಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಶ್ರೀ ಎಚ್.ಎಸ್. ಚಂದ್ರಮೌಳಿ ನೆರವೇರಿಸಲಿದ್ದಾರೆ.
‘ಶರಣ ಸಂಸ್ಕೃತಿ’ಯ ಕುರಿತು ಪತ್ರಕರ್ತರಾದ ಶ್ರೀ ಎಸ್. ಮಹೇಶ್ ಇವರು ಉಪನ್ಯಾಸ ನೀಡಲಿರುವರು. ಮುಖ್ಯ ಅತಿಥಿಗಳಾಗಿ ದತ್ತಿದಾನಿ ಮಹಾಶರಣ ಮಾಗನೂರು ಬಸಪ್ಪ ಟ್ರಸ್ಟಿನ ಗೌರವ ಕಾರ್ಯದರ್ಶಿಯಾದ ಶ್ರೀ ಎಂ.ಬಿ. ಸಂಗಮೇಶ್ವರ ಗೌಡ, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಂ.ಆರ್. ನಿರಂಜನ್, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಎಸ್.ಡಿ.ವಿಜೇತ್, ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಿ.ಪಿ. ಶಾಂತಮಲ್ಲಪ್ಪ ಉಪಸ್ಥಿತರಿರುತ್ತಾರೆ.
ಕೊಡ್ಲಿಪೇಟೆ ಹೋಬಳಿಯಲ್ಲಿ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇಕಡ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಗುವುದು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರನ್ನೂ ಆದರ ಪೂರ್ವಕವಾಗಿ ಸ್ವಾಗತಿಸಿದ್ದಾರೆ.