ಬಂಟ್ವಾಳ : ಕಥಾಬಿಂದು ಪ್ರಕಾಶನ ಮಂಗಳೂರು, ಭಯಂಕೇಶ್ವರ ದೇವಸ್ಥಾನ ಪಾಣೆಮಂಗಳೂರು ನರಿಕೊಂಬು, ಸೀನಿಯರ್ ಛೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ಸಂಯುಕ್ತ ಆಶ್ರಯದಲ್ಲಿ ಪಾಣೆಮಂಗಳೂರಿನ ಭಯಂಕೇಶ್ವರ ದೇವಸ್ಥಾನದಲ್ಲಿ ದಿನಾಂಕ 04 ಜನವರಿ 2025ರಂದು ಕಥಾಬಿಂದು ಸಾಹಿತ್ಯ ಸಂಭ್ರಮ 2026 ನೆರವೇರಲಿದೆ.
ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಲೇಖಕರ 10 ಕೃತಿಗಳ ಅನಾವರಣ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ‘ಕನ್ನಡ ರತ್ನ’ ರಾಜ್ಯ ಪ್ರಶಸ್ತಿ ಪ್ರದಾನ ನಡೆಯಲಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿ ಸಾಧಕರಿಗೆ ಕನ್ನಡ ರತ್ನ ರಾಜ್ಯ ಪ್ರಶಸ್ತಿಯನ್ನು ಪಿ.ವಿ. ಪ್ರದೀಪ್ ಕುಮಾರ್ ಪ್ರಧಾನ ಮಾಡಲಿರುವರು. ಕ.ಸಾ.ಪ. ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಭಯಂಕೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ. ರಘುನಾಥ ಸೋಮಯಾಜಿ ಉದ್ಘಾಟಿಸಿಸುವರು. ಯುಗ ಪುರುಷ ಮಾಸ ಪತ್ರಿಕೆಯ ಸಂಪಾದಕ ಭುವನಾಭಿರಾಮ ಉಡುಪ, ಹಿರಿಯ ಸಾಹಿತಿ ಡಾ. ಕೊಳ್ಚಪ್ಪೆ ಗೋವಿಂದ ಭಟ್, ಉದ್ಯಮಿ ಶ್ರೀಪತಿ ಭಟ್ ಮೂಡುಬಿದ್ರೆ, ಎಸ್.ಸಿ.ಐ. ಅಧ್ಯಕ್ಷ ತಾರನಾಥ ಕೊಟ್ಟಾರಿ, ಕ.ಚು.ಸಾ.ಪ. ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಕವಿಗೋಷ್ಠಿ ಸಂಚಾಲಕಿ ಡಾ. ಶಾಂತ ಪುತ್ತೂರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕವಿ ಜಯಾನಂದ ಪೆರಾಜೆ ಅಧ್ಯಕ್ಷತೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ 40 ಮಂದಿ ಕವಿಗಳು ಭಾಗವಹಿಸಲಿದ್ದಾರೆ. ಸುಭಾಷಿಣಿ ಬೇಕೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜನೆ ಮಾಡಲಾಗಿದೆ ಎಂದು ಕಥಾ ಬಿಂದು ಪ್ರಕಾಶನದ ಪ್ರದೀಪ್ ಕುಮಾರ್ ಮತ್ತು ಬಂಟ್ವಾಳ ನೇತ್ರಾವತಿ ಸಂಗಮದ ಅಧ್ಯಕ್ಷ ತಾರನಾಥ ಕೊಟ್ಟಾರಿ ತಿಳಿಸಿದ್ದಾರೆ.

