ಬೈಲಹೊಂಗಲ : ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದಂಗವಾಗಿ ದಿನಾಂಕ 22 ಫೆಬ್ರವರಿ 2026ರಂದು ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇಸರಗಿ ಗ್ರಾಮದ ಪತ್ರಕರ್ತ, ಸಾಹಿತಿ, ಸಂಘಟಕ ಸಿ.ವೈ. ಮೆಣಸಿನಕಾಯಿ ಇವರಿಗೆ ‘ಕವಿ ಕಾವ್ಯ ವಿಭೂಷಣ ಪ್ರಶಸ್ತಿ 2026’ ನೀಡಿ ಗೌರವಿಸಲಾಗುತ್ತದೆ.
ಸಿ.ವೈ. ಮೆಣಸಿನಕಾಯಿ ಇವರು ಈಗಾಗಲೇ ಹಲವು ಲೇಖನ, ಕವನ ಬರೆದು ಪ್ರಕಟಿಸಿದ್ದಾರೆ. ಇವರು 13 ಪುಸ್ತಕಗಳನ್ನು ಬರೆದಿದ್ದಾರೆ. ಕಾರ್ಯಕ್ರಮದಲ್ಲಿ ಶ್ರೀ ಎಡನೀರು ಮಠಾಧೀಶ ಸಚ್ಚಿದಾನಂದ ಭಾರತೀ ಶ್ರೀಪಾದಂಗಳು, ಗೋನಾಳದ ರಮೇಶ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲ, ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಗೌರವಾಧ್ಯಕ್ಷ ಪ್ರದೀಪಕುಮಾರ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟರಮಣ ಹೊಳ್ಳೆ, ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ಗಣ್ಯರ ಸಮ್ಮುಖದಲ್ಲಿ ಇವರಿಗೆ ‘ಕವಿ ಕಾವ್ಯ ವಿಭೂಷಣ ಪಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
