ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಮತ್ತು ಶ್ರೀ ರಾಮಕೃಷ್ಣ ಪದವಿ ಕಾಲೇಜು ಮಂಗಳೂರು ಇವುಗಳ ಸಹಯೋಗದಲ್ಲಿ ‘ಮತದಾನ – ಪ್ರದಾನ ಕವಿಗೋಷ್ಠಿ ಮತ್ತು ಸಂವಾದ’ ಕಾರ್ಯಕ್ರಮವನ್ನು ದಿನಾಂಕ 20-04-2024ರಂದು ಬೆಳಗ್ಗೆ 10-00 ಗಂಟೆಗೆ ಮಂಗಳೂರಿನ ಬಂಟ್ಸ್ ಹಾಸ್ಟಲ್ ಇಲ್ಲಿರುವ ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಕೃಷ್ಣ ಶೆಟ್ಟಿಯವರು ವಹಿಸಲಿದ್ದು, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷರಾದ ಪ್ರೊ. ಗಣಪತಿ ಭಟ್ ಕುಳಮರ್ವ ಇವರು ಉದ್ಘಾಟಿಸಲಿದ್ದಾರೆ. ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲೆ ಅಧ್ಯಕ್ಷರಾದ ಪಿ.ಬಿ. ಹರೀಶ್ ರೈ ಇವರು ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ. ಜಿಲ್ಲಾ ಸಮಿತಿ ಆಯೋಜಿಸಿದ ಅಯೋಧ್ಯೆಯಲ್ಲಿ ರಾಮಮಂದಿರ, ಮನೆಮನಗಳಲ್ಲಿ ರಾಮಚಂದಿರ ಕವಿತಾ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭವು ನಡೆಯಲಿರುವುದು. ಈ ಸ್ಪರ್ಧೆಯಲ್ಲಿ ಲಕ್ಷ್ಮೀ ವಿ. ಭಟ್ ಪ್ರಥಮ, ಅಶೋಕ ಎನ್. ಕಡೇಶಿವಾಲಯ ದ್ವಿತೀಯ ಹಾಗೂ ಗಂಗಾಧರ ಕೆ. ಕಾಯರ್ತಡ್ಕ ಮತ್ತು ಲಕ್ಷ್ಮೀ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.