ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿಯು ದಿನಾಂಕ 21-10-2023ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಆಶಾಕುಮಾರಿ “ಕಲೆ, ಸಾಹಿತ್ಯ, ಸಂಗೀತ, ಕಾವ್ಯ, ನಾಟಕ ಇವುಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ಓದಿನಲ್ಲಿ ಏಕಾಗ್ರತೆ ಮತ್ತು ಶ್ರದ್ಧೆ ಮೂಡುತ್ತದೆ.” ಎಂದು ತಿಳಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ಉಡುಪಿ ತಾಲ್ಲೂಕಿನ ಕ.ಸಾ.ಪ ಅಧ್ಯಕ್ಷ ಹಾಗೂ ಕಾಲೇಜು ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಶ್ರೀ ರವಿರಾಜ್ ಹೆಚ್.ಪಿ ಮಾತನಾಡಿ “ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಕಥೆ, ಕವನಗಳನ್ನು ರಚಿಸಲು ಒಲವು ತೋರಿದಲ್ಲಿ ಮುಂದೆ ಸಾಮಾಜಿಕ ವೇದಿಕೆಯಲ್ಲಿ ಉತ್ತಮ ಕವಿ ಮತ್ತು ಲೇಖಕರಾಗಿ ಮೂಡಿಬರಲು ಸಾಧ್ಯ ಎಂದರು. ಕ.ಸಾ.ಪ ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಶ್ರೀ ಮನೋಹರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಹಿರಿಯಡ್ಕದ ಕವಯಿತ್ರಿ ಶ್ರೀಮತಿ ಪೂರ್ಣಿಮಾ ಸುರೇಶ್ ಕವಿಗೋಷ್ಠಿಯ ಆಶಯ ಭಾಷಣದಲ್ಲಿ “ಕವಿತೆಯ ಮೂಲಕ ಭಾವನೆಗಳನ್ನು ಪ್ರಕಟ ಮಾಡುವವರು ಕವಿಗಳು, ಬಾಲ್ಯದಿಂದ ಮುಪ್ಪಿನವರೆಗೆ ಅನುಭವಿಸುವ ಅನುಭವಗಳನ್ನು ಕಾವ್ಯ ಬಿತ್ತರಿಸುತ್ತದೆ, ಒಳನೋಟ ಕಾಣಲು ನಮ್ಮಲ್ಲಿ ಭಾವನೆಗಳು ಬೇಕು.” ಎಂದು ಹೇಳಿದರು.
ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಹಾಗೂ ರಂಗನಟ ಶ್ರೀ ರಾಜೇಶ್ ಭಟ್ ಪಣಿಯಾಡಿ ವಹಿಸಿಕೊಂಡು “ಕವಿತೆ ಹುಟ್ಟಲು ಜಾಗ, ಪ್ರಕೃತಿ, ಏಕಾಂತ, ನೋವು, ರೋಷ, ಭಾವ ಬೇಕಾಗುತ್ತದೆ. ಭಾವನೆಗಳನ್ನು ಬಿತ್ತರಿಸಲು ಕವಿತೆ ಒಂದು ಸಾಧನ.” ಎಂದು ತಿಳಿಸಿದರು. ಸಾಹಿತಿ ಶ್ರೀ ನಾರಾಯಣ ಮಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಪ್ರೇಮಸಾಯಿ, ಕಾವ್ಯ ಶೆಟ್ಟಿ, ರಕ್ಷಿತಾ, ಆಶಿಕಾ, ಸ್ನೇಹಾ, ಸಿಂಚನಾ, ಅದೀಶಾ, ಕೃತಿಕಾ, ನಂದೀಶ್ ಕವನಗಳನ್ನು ರಚಿಸಿ ವಾಚಿಸಿದರು. ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ ಸಭಾ ಕಾರ್ಯಕ್ರಮವನ್ನು ಹಾಗೂ ಕ.ಸಾ.ಪ ಉಡುಪಿ ತಾಲ್ಲೂಕಿನ ಗೌರವ ಕಾರ್ಯದರ್ಶಿ ಶ್ರೀ ಜನಾರ್ದನ ಕೊಡವೂರು ಕವಿಗೋಷ್ಠಿಯನ್ನು ನಿರೂಪಿಸಿ, ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಶ್ರೀ ಶಶಿಕಾಂತ್ ಶೆಟ್ಟಿ ಸ್ವಾಗತಿಸಿ, ಕವಿಗೋಷ್ಠಿಯ ಸಂಚಾಲಕ ರಾಘವೇಂದ್ರ ಜಿ.ಜಿ ವಂದಿಸಿದರು.
Subscribe to Updates
Get the latest creative news from FooBar about art, design and business.
Previous Articleಜಮ್ಮು ಕಾಶ್ಮೀರದಲ್ಲಿ ಯಕ್ಷಗಾನ ಹಾಗೂ ಭರತನಾಟ್ಯ ಕಾರ್ಯಕ್ರಮ
Next Article ಉಡುಪಿಯಲ್ಲಿ “ಸಿಂಧೂರ” ಚಿತ್ರಕಲಾ ಪ್ರದರ್ಶನ