ಬೆಂಗಳೂರು : ರಂಗಮಂಡಲ ಬೆಂಗಳೂರು ಮತ್ತು ಪರಂಪರಾ ಕಲ್ಚರಲ್ ಫೌಂಡೇಷನ್ (ರಿ.) ಆಯೋಜಿಸಿರುವ ‘ಕಾವ್ಯ ಸಂಸ್ಕೃತಿ ಯಾನ’ ಕಾರ್ಯಕ್ರಮದ ಐದನೇ ಕವಿಗೋಷ್ಠಿ ಮನುಕುಲದ ನೋವಿಗೆ ಮದ್ದಾಗಲಿ ಕವಿತೆಗಳು ಜನಸಾಮಾನ್ಯರ ದನಿಯಾಗಲಿ ಕಾವ್ಯ ಹೀಗೆ ಜನರೆಡೆಗೆ ಕಾವ್ಯ ಕೊಂಡುಹೋಗುವ ಕಾರ್ಯಕ್ರಮ ಇದಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ರಾಜಧಾನಿ ಬೆಂಗಳೂರಿನಿಂದ ಕಾಫಿನಾಡು ಚಿಕ್ಕಮಗಳೂರಿನ ಕಡೆಗೆ ‘ಕಾವ್ಯ ದೀವಟಿಗೆಯ ಪಯಣ’ವು ದಿನಾಂಕ 17 ನವೆಂಬರ್ 2024ರಂದು ಬೆಳಿಗ್ಗೆ 10-30 ಗಂಟೆಗೆ ಬೆಂಗಳೂರಿನ ಜಯಚಾಮರಾಜೇಂದ್ರ ರಸ್ತೆ, ಕನ್ನಡ ಭವನ ಲಲಿತಕಲಾ ಅಕಾಡೆಮಿ ವರ್ಣ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ.
ಬೆಂಗಳೂರು ಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಮಹಾಬಲ ಮೂರ್ತಿ ಕೊಡ್ಲೆಕೆರೆ ಇವರು ವಹಿಸಲಿದ್ದು, ಉದ್ಘಾಟಕರಾಗಿ ಪ್ರಗತಿಪರ ಹೋರಾಟಗಾರರು ಮತ್ತು ಸಂಸ್ಕೃತಿ ಚಿಂತಕರಾದ ಡಾ. ವಡ್ಡಗೆರೆ ನಾಗರಾಜಯ್ಯ ಭಾಗವಹಿಸಲಿದ್ದಾರೆ. ನಾಡಿನ ಖ್ಯಾತ ಕವಿಗಳಿಂದ ‘ಕವಿತಾ ವಾಚನ’ ಮತ್ತು ‘ಪದ ಪಾದ’ ಕಾರ್ಯಕ್ರಮ ನಡೆಯಲಿದೆ.