ಮುಳ್ಳೇರಿಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ 80ರ ಸಂಭ್ರಮ ಕಾರ್ಯಕ್ರಮ, ಕೀರಿಕ್ಕಾಡು ಪುರಸ್ಕಾರ ಪ್ರದಾನ ಹಾಗೂ ಆರೋಗ್ಯ ತರಬೇತಿ ಶಿಬಿರ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ದಿನಾಂಕ 01 ಡಿಸೆಂಬರ್ 2024ರ ಭಾನುವಾರ ನಡೆಯಿತು.
ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕದ ಅಧ್ಯಕ್ಷರಾದ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಇವರಿಗೆ ಕೀರಿಕ್ಕಾಡು ಪುರಸ್ಕಾರವನ್ನು ಪ್ರದಾನಿಸಲಾಯಿತು. ನಿವೃತ್ತ ಮುಖ್ಯ ಶಿಕ್ಷಕ ಡಿ. ರಾಮಣ್ಣ ಮಾಸ್ತರ್ ಅಭಿನಂದನಾ ಭಾಷಣ ಮಾಡಿದರು. ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ರಮಾನಂದ ಬನಾರಿ, ಕಾರ್ಯದರ್ಶಿ ವಿಶ್ವವಿನೋದ ಬನಾರಿ, ನಂದಕಿಶೋರ ಬನಾರಿ ಮತ್ತಿತರರು ಉಪಸ್ಥಿತರಿದ್ದರು.
ನಮಿತ ಬೆಳ್ಳಿಪ್ಪಾಡಿ ಪ್ರಾರ್ಥನೆ ಹಾಡಿ, ಪೂಜಾಶ್ರೀ ದೇಲಂಪಾಡಿ ಸ್ವಾಗತಿಸಿ, ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ, ರಮಾನಂದ ರೈ ವಂದಿಸಿದರು. ಬಳಿಕ ಹಿರಿಯ ಯಕ್ಷಗಾನ ಕಲಾವಿದರ ನೇತೃತ್ವದಲ್ಲಿ ಶ್ರೀರಾಮ ದರ್ಶನ ಯಕ್ಷಗಾನ ತಾಳಮದ್ದಳೆ ನಡೆಯಿತು. ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಯೋಗ ಪ್ರಾತ್ಯಕ್ಷಿಕೆ ನೀಡಿದರು.
Subscribe to Updates
Get the latest creative news from FooBar about art, design and business.
Previous Articleತೆಕ್ಕಟ್ಟೆ ಕನ್ನುಕೆರೆಯ ನವಶಕ್ತಿ ಕಲ್ಯಾಣ ಮಂಟಪದಲ್ಲಿ ‘ಯಕ್ಷ ರಸ ಗಾಯನ’
Related Posts
Comments are closed.