ಉಡುಪಿ : ತುಳುಕೂಟ ಉಡುಪಿ (ರಿ.) ಇದರ ವತಿಯಿಂದ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ, ಎಂ.ಜಿ.ಎಂ. ಕಾಲೇಜು ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಮತ್ತು ಅಖಿಲ ಭಾರತ ತುಳು ಒಕ್ಕೂಟ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ‘ಕೆಮ್ತೂರು ತುಳು ನಾಟಕ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 26 ಜನವರಿ 2025ರಂದು ಸಂಜೆ 5-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ.
ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾರಂಭದಲ್ಲಿ ರಂಗ ಕಲಾವಿದರಾದ ಶ್ರೀ ಭಾಸ್ಕರ್ ಮಣಿಪಾಲ ಇವರನ್ನು ಸನ್ಮಾನಿಸಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ‘ಕೆಮ್ತೂರು ತುಳು ನಾಟಕ ಪ್ರಶಸ್ತಿ’ ಪಡೆದ ಸುಮನಸಾ ಕೊಡವೂರು ಉಡುಪಿ (ರಿ.) ತಂಡದವರಿಂದ ‘ಈದಿ’ ನಾಟಕದ ಪ್ರದರ್ಶನ ನಡೆಯಲಿದೆ.