ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಶ್ರೀ ಸರ್ವೇಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ.) ಇದರ ಸಹಭಾಗಿತ್ವದಲ್ಲಿ 8ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಮಹೋತ್ಸವ ಅಂಗವಾಗಿ ನಾಡಿಗಾಗಿ, ನಾಡಿನ ಏಳಿಗೆಗಾಗಿ ಗಣನೀಯ ಸೇವೆ ಸಲ್ಲಿಸಿದ ಪತ್ರಿಕೋದ್ಯಮ, ಸಾಹಿತ್ಯ, ಸಂಘಟನೆ, ಸಮಾಜಸೇವೆಗಾಗಿ ಮಾಜಿ ಮುಖ್ಯಮಂತ್ರಿ ವಿಧಾನಸೌಧ ನಿರ್ಮಾತ್ ದಿವಂಗತ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನ ರಾಷ್ಟ್ರ ಪ್ರಶಸ್ತಿಯನ್ನು ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಇವರಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ದಿನಾಂಕ 24 ಮಾರ್ಚ್ 2025ರಂದು ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಖ್ಯಾತ ಗಾಯಕ ಶಶಿಧರ ಕೋಟೆ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಚಲನ ಚಿತ್ರನಟ ಶಿವಕುಮಾರ ಆರಾಧ್ಯ, ಹೊಸಮಠ ಮಹಾಸ್ವಾಮಿಗಳಾದ ಬಸವ ಶಾಂತಲಿಂಗ ಮಹಾಸ್ವಾಮಿಗಳು, ಡಾ. ಪುತ್ತೂರಾಯ, ಡಾ. ಕೆಂಚನೂರು ಶಂಕರ್, ಲಷೀತಾ ಗಂಗಾವತಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
 
									 
					