ಬೆಂಗಳೂರು : ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್ (ರಿ.) ವೈಟ್ ಫೀಲ್ಡ್ ಬೆಂಗಳೂರು, ಮಕ್ಕಳ ಸಾಹಿತ್ಯ ಮಾಸಿಕ ‘ತೊದಲ್ನುಡಿ’, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾಸರಗೋಡು ಇವರ ಸಂಯುಕ್ತಾಶ್ರಯದಲ್ಲಿ ‘ಕೇರಳ ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ದಿನಾಂಕ 20 ಜುಲೈ 2025ರಂದು ಬೆಳಗ್ಗೆ 10-00 ಗಂಟೆಗೆ ಬೆಂಗಳೂರಿನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್ ಆವರಣದಲ್ಲಿ ಆಯೋಜಿಸಲಾಗಿದೆ.
ತೊದಲ್ನುಡಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಸುಷ್ಮಾ ಶಂಕರ್ ಇವರು ಅಧ್ಯಕ್ಷತೆ ವಹಿಸಲಿದ್ದು, ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಪತ್ರಕರ್ತ ಗಣೇಶ್ ಕಾಸರಗೋಡು, ಚಲನಚಿತ್ರ ಪತ್ರಕರ್ತ ಸುಬ್ರಹ್ಮಣ್ಯ ಬಾಡೂರು ಮತ್ತು ಪ್ರಾಧ್ಯಾಕಪರಾದ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಇವರಿಗೆ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ, ಕರ್ಣಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಮತ್ತು ತೊದಲ್ನುಡಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಸುಷ್ಮಾ ಶಂಕರ್ ಇವರಿಗೆ ‘ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ’, ಕರ್ಣಾಟಕ ಸಂಗೀತ ನೃತ್ಯ ಹಾಗೂ ಅಕಾಡೆಮಿ ಸದಸ್ಯರಾದ ಪದ ದೇವರಾಜ್, ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಬೆಂಗಳೂರು ಘಟಕದ ಅಧ್ಯಕ್ಷರಾದ ಹಾ.ಮ. ಸತೀಶ ಬೆಂಗಳೂರು, ಆಚಾರ್ಯರಾದ ಆರ್. ಶ್ರೀನಿವಾಸ್, ಪ್ರಾಧ್ಯಾಪಕರಾದ ಡಾ. ಮಲರ್ ವಿಳಿ ಕೆ., ವಿಜಯ ಕರ್ಣಾಟಕ ದಿನ ಪತ್ರಿಕೆಯ ಸಹ ಸಂಪಾದಕರಾದ ಮೇರಿ ಜೋಸೆಫ್ ಮತ್ತು ಸಹಾಯಕ ಪ್ರಾಧ್ಯಾಪಕರಾದ ಡಾ. ರವಿಶಂಕರ ಎ.ಕೆ. ಇವರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.