ಹೊನ್ನಾವರ: ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಇದರ 90ನೇ ವರ್ಷದ ಸಂಭ್ರಮದಲ್ಲಿ ಯಕ್ಷಗಾನ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಶ್ರೀ ಧರ್ಮಸ್ಥಳ ಮೇಳದ ಪ್ರಧಾನ ಭಾಗವತರಾದ ಸಿರಿಬಾಗಿಲು ರಾಮಕೃಷ್ಣ ಮಯ್ಯ ಇವರಿಗೆ “ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-15” ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ 25 ಫೆಬ್ರವರಿ 2025 ರಂದು ಹೊನ್ನಾವರದ ಗುಣವಂತೆಯಲ್ಲಿ ನಡೆಯಿತು.
ಈ ವೇಳೆ ಯಕ್ಷಗಾನದ ಹಿರಿಯ ಅರ್ಥದಾರಿ ಜಬ್ಬಾರ್ ಸಮೋ ಸಂಪಾಜೆ ಹಾಗೂ ಯಕ್ಷಗಾನ ಭಾಗವತ ಹಾಗೂ ಸಂಘಟಕ ರಾದ ಡಾ. ಸುರೇಂದ್ರ ಪಣಿಯೂರು ಇವರನ್ನು ಸನ್ಮಾನಿಸಲಾಯಿತು.

