Subscribe to Updates

    Get the latest creative news from FooBar about art, design and business.

    What's Hot

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    ಮಂಗಳೂರಿನ ಸಂಸ್ಕಾರ ಭಾರತೀ ವತಿಯಿಂದ ‘ಭರತಮುನಿ ಸ್ಮೃತಿ ದಿನ’

    February 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಯಶೋ ಮಾಧ್ಯಮ-2025’ ಪ್ರಶಸ್ತಿಗೆ ಕಿರಣ್ ಮಂಜನಬೈಲು ಆಯ್ಕೆ
    Awards

    ‘ಯಶೋ ಮಾಧ್ಯಮ-2025’ ಪ್ರಶಸ್ತಿಗೆ ಕಿರಣ್ ಮಂಜನಬೈಲು ಆಯ್ಕೆ

    June 13, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಬೆಂಗಳೂರಿನ ಸ್ಪಂದನಾ ಸೇವಾ ಸಂಸ್ಥೆಯಿಂದ ಉಡುಪಿ ಜಿಲ್ಲೆಯ ಪತ್ರಕರ್ತರ ಸಾಧನೆ ಗುರುತಿಸಿ ಕೊಡಲ್ಪಡುವ ‘ಯಶೋ ಮಾಧ್ಯಮ- 2025’ ಪ್ರಶಸ್ತಿಗೆ ಉಡುಪಿಯ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರರಾದ ಕಿರಣ್ ಮಂಜನಬೈಲು ಇವರು ಆಯ್ಕೆಯಾಗಿದ್ದಾರೆ. ದಿನಾಂಕ 14 ಜೂನ್ 2025ರ ಶನಿವಾರ ಬೆಳಿಗ್ಗೆ 10-00 ಗಂಟೆಗೆ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೀಡುವ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ವಹಿಸಲಿದ್ದು, ಕರ್ನಾಟಕ ರಾಜ್ಯ ಕ್ರಷರ್ ಮತ್ತು ಕ್ವಾರಿ ಮಾಲೀಕರ ಸಂಘಗಳ ಒಕ್ಕೂಟ (ರಿ.) ಇದರ ರಾಜ್ಯಾಧ್ಯಕ್ಷರಾದ ರವೀಂದ್ರ ಶೆಟ್ಟಿ ಬಜಗೋಳಿಯವರು ದೀಪ ಪ್ರಜ್ವಲಿಸಲಿರುವರು.
    ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ಅನಂತಪದ್ಮನಾಭ ಕಿಣಿ, ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ಜನಾರ್ದನ್ ಕೊಡವೂರು, ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಹಫೀಜ್, ಉದ್ಯಾನ ವಿನ್ಯಾಸಕರಾದ ಯು. ಲೋಕೇಶ್ ಪೂಜಾರಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಂಯೋಜಕರಾದ ಸುಬ್ರಹ್ಮಣ್ಯ ಕಾರಂತ್, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ನ ಸಹಾಯಕ ಪ್ರಾಧ್ಯಾಪಕರಾದ ಡಾ. ಮರಿಯಾ ಪಾಯಸ್, ಕಲ್ಯಾಣಪುರದ ಜಿ.ಎಸ್.ಬಿ. ಸಭಾ ಅಧ್ಯಕ್ಷರಾದ ಸಂತೋಷ್ ಕಾಮತ್, ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ಶ್ರೀಮತಿ ರಜನಿ ವಿ. ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    award baikady Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಜನಪದರು ರಂಗಮಂದಿರದಲ್ಲಿ ಯಕ್ಷಗಾನ ಮತ್ತು ನಾಟಕ ಪ್ರದರ್ಶನ | ಜೂನ್ 14 ಮತ್ತು 15
    Next Article ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14
    roovari

    Add Comment Cancel Reply


    Related Posts

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ನಾಲ್ಕನೇ ದಿನದ ಕಾರ್ಯಕ್ರಮ

    February 27, 2026

    ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14’ರ ಮೂರನೇ ದಿನದ ಕಾರ್ಯಕ್ರಮ

    February 27, 2026

    ಉದಯೋನ್ಮುಖ ನೃತ್ಯ ಕಲಾವಿದೆ ಕುಮಾರಿ ವಿಶ್ವನೇತ ಡಿ. ಇವರ ಭರತನಾಟ್ಯ ರಂಗಪ್ರವೇಶ

    February 27, 2026

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ವಾರ್ಷಿಕೋತ್ಸವ ಸಮಾರಂಭ

    February 26, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.