Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ಬಹುರೂಪಿ ಪ್ರಕಾಶನದ ‘ಕೊನೆಯ ಹೀರೋಗಳು’ ಬಿಡುಗಡೆ 
    Book Release

    ಬೆಂಗಳೂರಿನಲ್ಲಿ ಬಹುರೂಪಿ ಪ್ರಕಾಶನದ ‘ಕೊನೆಯ ಹೀರೋಗಳು’ ಬಿಡುಗಡೆ 

    October 2, 2023No Comments3 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು: ‘ನಮ್ಮ ಸಂವಿಧಾನವನ್ನು ರಕ್ಷಿಸುವ ಹೊಣೆ ನಮ್ಮೆಲ್ಲರ ಮೇಲಿದೆ’ ಎಂದು ಖ್ಯಾತ ಪತ್ರಕರ್ತ, ಮ್ಯಾಗ್ಸೇಸೆ ಪ್ರಶಸ್ತಿ ವಿಜೇತರಾದ ಪಿ. ಸಾಯಿನಾಥ್ ಅವರು ಅಭಿಪ್ರಾಯಪಟ್ಟರು.

    ಬೆಂಗಳೂರಿನಲ್ಲಿ ಇಂದು ‘ಬಹುರೂಪಿ’ ಪ್ರಕಾಶನ ಹಮ್ಮಿಕೊಂಡಿದ್ದ ಪಿ ಸಾಯಿನಾಥ್ ಅವರ, ಜಿ ಎನ್ ಮೋಹನ್ ಅವರು ಕನ್ನಡಕ್ಕೆ ಅನುವಾದಿಸಿರುವ ‘ಕೊನೆಯ ಹೀರೋಗಳು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

    ‘ಬಹುರೂಪಿ’ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಿ ಸಾಯಿನಾಥ್ ಅವರ ‘ಕೊನೆಯ ಹೀರೋಗಳು’ ಕೃತಿಯನ್ನು ಹಿರಿಯ ವಿದ್ವಾಂಸರಾದ ಪ್ರೊ ಪುರುಷೋತ್ತಮ ಬಿಳಿಮಲೆ ಅವರು ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಶ್ರೀಜಾ ವಿ ಎನ್, ಡಾ ವಿಜಯಮ್ಮ, ಸ್ವಾತಂತ್ರ್ಯ ಹೋರಾಟದ ಕುಟುಂಬಸ್ಥರು, ಎಚ್ ಎನ್ ನಾಗಮೋಹನ ದಾಸ್, ಎನ್ ಆರ್ ವಿಶುಕುಮಾರ್, ಜಿ ಎನ್ ಮೋಹನ್ ಉಪಸ್ಥಿತರಿದ್ದರು.

    ನಮ್ಮ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವದ ನಾಶವನ್ನು ತಡೆಯುವುದ ತುರ್ತು ಅಗತ್ಯವಾಗಿದೆ. ಕೇಂದ್ರ ಸರಕಾರವು ರೂಪಿಸುತ್ತಿರುವ ಕಾಯಿದೆಗಳು ಜನ ವಿರೋಧಿಯಾಗಿದೆ. ಸಮಾಜವನು ನಿಧಾನವಾಗಿ ಉಸಿರುಗಟ್ಟಿಸುತ್ತಿದೆ. ರೈತರು ದೆಹಲಿಯಲ್ಲಿ  ನಡೆಸಿದ ಪ್ರತಿಭಟನೆ ರೈತರ ಹಕ್ಕುಗಳನ್ನು ರಕ್ಷಿಸುವುದು ಮಾತ್ರವಾಗಿರಲಿಲ್ಲ, ಅದು ಪರೋಕ್ಷವಾಗಿ ಸಂವಿಧಾನವನ್ನು, ಪ್ರಜಾಪ್ರಭುತ್ವವನ್ನು ರಕ್ಷಿಸುವ ಚಳವಳಿಯಾಗಿತ್ತು.

    ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಆದರೆ ಬಿಡುಗಡೆ ಸಿಕ್ಕಿಲ್ಲ ಎನ್ನುವುದು ಬಹುತೇಕ ಸ್ವಾತಂತ್ರ್ಯ ಹೋರಾಟಗಾರರ ಅಳಲು. ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಕೊನೆಗೊಂಡಾಗ, ಜಾತಿ ತಾರತಮ್ಯಗಳಿಲ್ಲದೆ ಎಲ್ಲರಿಗೂ ಸಂಪನ್ಮೂಲಗಳು ಸಮಾನವಾಗಿ ಹಂಚಿಕೆಯಾದಾಗ ಸಂಪೂರ್ಣ ಬಿಡುಗಡೆ ಸಿಗುತ್ತದೆ ಎಂಬುದು ಅವರ ಅಭಿಪ್ರಾಯವಾಗಿದೆ. ಆದರೆ, ಬಿಡುಗಡೆ ಎಂಬುದರ ವ್ಯಾಪ್ತಿ ತುಂಬಾ ಹಿರಿದಾಗಿದೆ. ಇದನ್ನು ಪಡೆದುಕೊಳ್ಳಲು ನಾವೆಲ್ಲರೂ ಒಂದಾಗಬೇಕಿದೆ. ಈ ಕಾರಣಕ್ಕಾಗಿಯೇ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ಹಲ್ಲೆಗಳನ್ನು ತಡೆಗಟ್ಟಬೇಕಾಗಿದೆ.

    ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಮಹತ್ತರ ಪಾತ್ರ ನಿರ್ವಹಿಸಿದ್ದಾರೆ. ವಾಸ್ತವವಾಗಿ ಅವರೇ ಸ್ವಾತಂತ್ರ್ಯದ ನಿಜ ಹೋರಾಟಗಾರ್ತಿಯರಾದರೂ, ಯಾವುದೇ ಪಟ್ಟಿಗೂ ಸೇರ್ಪಡೆಗೊಳಿಸದೆ, ಅವರೆಲ್ಲರನ್ನೂ ಕಡೆಗಣಿಸಲಾಗಿದೆ. ಮನೆಗಳಲ್ಲಿ ಅಡುಗೆ ಮಾಡಿಕೊಂಡು, ಕುಟುಂಬವನ್ನು ನಿರ್ವಹಿಸುವ ಜತೆಗೆ ಕೃಷಿ ಕಾರ್ಯವನ್ನೂ ಮಾಡಿ, ಸ್ವಾತಂತ್ರ್ಯ ಹೋರಾಟಕ್ಕೆ ಪರೋಕ್ಷವಾಗಿ ಮಹಿಳೆಯರು ಸಹಕರಿಸಿದ್ದಾರೆ. ಕೆಲವೊಮ್ಮೆ ಬಂದೂಕು ಹಿಡಿದುಕೊಂಡು, ಇಲ್ಲವೇ ಶಸ್ತ್ರಾಸ್ತ್ರಗಳ ಸಾಗಾಟದಂತ ಕಾರ್ಯಗಳಲ್ಲೂ ನೆರವಾಗಿದ್ದಾರೆ. ಆದರೆ, ಇವರು ಯಾರೂ ಗುಂಡು ಹಾರಿಸಿಲ್ಲ, ಜೈಲಿಗೆ ಹೋಗಿಲ್ಲ ಎಂಬ ಕಾರಣಕ್ಕಾಗಿ ಅಧಿಕಾರಶಾಹಿಯ ಕೆಂಪುಪಟ್ಟಿ ನಿಲುವು ಅವರು ಯಾರಿಗೂ ಸ್ವಾತಂತ್ರ್ಯ ಯೋಧರು ಎಂಬ ಸ್ಥಾನಮಾನ ಸಿಗದಂತೆ ಮಾಡಿತು ಎಂದು ಬೇಸರ ವ್ಯಕ್ತಪಡಿಸಿದರು.

    ಕೃತಿಯನ್ನು ಬಿಡುಗಡೆ ಮಾಡಿದ ಹಿರಿಯ ವಿದ್ವಾಂಸರಾದ ಪ್ರೊ ಪುರುಷೋತ್ತಮ ಬಿಳಿಮಲೆ ಅವರು 1990ರ ದಶಕದಲ್ಲಿ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಅವರ ನೇತೃತ್ವದಲ್ಲಿ ಕೇಂದ್ರ ವಿತ್ತ ಸಚಿವರಾಗಿದ್ದ ಡಾ. ಮನಮೋಹನ್ ಸಿಂಗ್ ಅವರು ಮುಕ್ತ ನೀತಿ ಜಾರಿಗೊಳಿಸಿದರು. ಇದರ ಜತೆಗೆ ಲಾಲ್ ಕೃಷ್ಣ ಅಡ್ವಾಣಿಯವರು ನಡೆಸಿದ ರಥಯಾತ್ರೆ ನಡೆಸಿದರು. ಈ ಎರಡು ಘಟನೆಗಳು ಇಡೀ ದೇಶವನ್ನು ಆಳವಾಗಿ ಘಾಸಿಗೊಳಿಸಿವೆ. ಈ ಗಾಯಗಳು ಮಾಗಲು ತುಂಬಾ ಸಮಯ ಬೇಕಾಗುತ್ತದೆ ಎಂದು ಹೇಳಿದರು.

    1992ರಿಂದ 2017ರ ನಡುವೆ ರಾಷ್ಟ್ರದಾದ್ಯಂತ 17 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜತೆಗೆ ಬಡತನ ಹೆಚ್ಚಾಗುತ್ತಲೇ ಹೋಗುತ್ತಿದೆ. ಆದರೆ, ಮಾಧ್ಯಮಗಳು ಈ ಬಗ್ಗೆ ಚಕಾರವೆತ್ತದೆ, ಈ ಯಾವುದೇ ವಿಷಯಗಳಿಗೆ ಪ್ರಾಮುಖ್ಯತೆ ಕೊಡದೆ, ಬಂಡವಾಳಶಾಹಿಗಳ ಪರವಾದ ನಿಲುವು ಪ್ರಕಟಪಡಿಸುತ್ತಾ, ತಮ್ಮ ಜವಾಬ್ದಾರಿ ಮರೆಯುತ್ತಿವೆ. ಇದು ಜಾಗತೀಕರಣ ಕರಾಳತೆಗೆ ಹಿಡಿದ ಕೈಗನ್ನಡಿ ಎಂದರು.

    1992ರ ನಂತರದಲ್ಲಿ ರಾಷ್ಟ್ರದಲ್ಲಿ ಬೌದ್ಧಿಕ ಸ್ಥಿತ್ಯಂತರಗಳು ಉಂಟಾಗಿವೆ. ಅದುವರೆಗೂ ಸಮಾಜವಾದ, ಸಮಾನತೆ ಎಂದು ಸಂವಿಧಾನಿಕ ಪರಿಭಾಷೆಯಲ್ಲಿ ಮಾತನಾಡುತ್ತಿದ್ದವರು ಮತೀಯ ಭಾಷೆಯಲ್ಲಿ ಮಾತನಾಡಲು ಆರಂಭಿಸಿದರು. ಆದರೆ ಪಿ. ಸಾಯಿನಾಥ್ ಅವರ ಕೊನೆಯ ಹೀರೋಗಳು ಕೃತಿಯಲ್ಲಿರುವ 16 ಮಂದಿ ಸ್ವಾತಂತ್ರ್ಯ ಯೋಧರು ಎಂದಿಗೂ ಇಂಥ ಸ್ಥಿತ್ಯಂತರಕ್ಕೆ ಒಳಗಾಗಲಿಲ್ಲ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ನಿಲುಗಳು, ತಾವು ರೂಢಿಸಿಕೊಂಡಿದ್ದ ಗಾಂಧಿವಾದದ ಅಂಶಗಳನ್ನು ಆಧರಿಸಿ ಜೀವನ ಸಾಗಿಸಿದರು ಎಂದು ಹೇಳಿದರು.

    ರಾಜ್ಯ ಹೈಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿಗಳಾದ ಎಚ್ ಎನ್ ನಾಗಮೋಹನ ದಾಸ್ ಅವರು ಮಾತನಾಡಿ ದಾಖಲೆಗಳಲ್ಲಿ ಇಲ್ಲದಿರುವ ಅಸಂಖ್ಯಾತ ಸ್ವಾತಂತ್ರ್ಯ ಯೋಧರಿಗೆ ದನಿಯಾದದ್ದು ಸಾಯಿನಾಥ್ ಅವರ ವಿಶೇಷ. ಸ್ವಾತಂತ್ರ್ಯ ಹೋರಾಟದ ಈ ಕಾಲಾಳು ಯೋಧರಿಂದ ಸ್ಫೂರ್ತಿ ಪಡೆಯೋಣ  ಎಂದು ಆಶಿಸಿದರು.

    ಕಾರ್ಯಕ್ರಮದಲ್ಲಿ ಅನುವಾದಕ ಜಿ ಎನ್ ಮೋಹನ್, ಸ್ವಾತಂತ್ರ್ಯ ಹೋರಾಟಗಾರ ಕುಟುಂಬದ ಸದಸ್ಯರು, ಗಾಂಧಿ ಸ್ಮಾರಕ ನಿಧಿಯ ಉಪಾಧ್ಯಕ್ಷರಾದ ಎನ್ ಆರ್ ವಿಶುಕುಮಾರ್, ಸಂಸ್ಕೃತಿ ಚಿಂತಕರಾದ ಡಾ ವಿಜಯಮ್ಮ, ಬಹುರೂಪಿಯ ಸಂಸ್ಥಾಪಕರಾದ ಶ್ರೀಜಾ ವಿ ಎನ್ ಉಪಸ್ಥಿತರಿದ್ದರು.

    ಕೃತಿ: ಕೊನೆಯ ಹೀರೋಗಳು 
    ಲೇ: ಪಿ ಸಾಯಿನಾಥ್ 
    ಅನು: ಜಿ ಎನ್ ಮೋಹನ್ 
    ಪ್ರ: ಬಹುರೂಪಿ, ಬೆಂಗಳೂರು 
    ಸಂಪರ್ಕ: 70191 82729 

    Share. Facebook Twitter Pinterest LinkedIn Tumblr WhatsApp Email
    Previous Articleತೆರೆಯಮರೆಗೆ ಸರಿದ ನಾಟ್ಯರಂಗದ ನೃತ್ಯ ವಿದ್ಯಾ ನಿಧಿ – ಕರ್ನಾಟಕ ಕಲಾಶ್ರೀ ಗುರು ಪ್ರೇಂನಾಥ
    Next Article ಬಂಡಾಯ ಸಾಹಿತ್ಯ ಸಂಘಟನೆಯ ತಿಂಗಳ ಕಾರ್ಯಕ್ರಮ | ಅಕ್ಟೋಬರ್ 6ರಂದು 
    roovari

    Add Comment Cancel Reply


    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.