ತಲಕಾಡು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಲಕಾಡು ಇದರ ಆಂತರಿಕ ಗುಣಮಟ್ಟ ಭರವಸಾ ಕೋಶ ಸಾಂಸ್ಕೃತಿಕ ವೇದಿಕೆ ಮತ್ತು ಕನ್ನಡ ವಿಭಾಗ ಆಯೋಜಿಸಿರುವ ಮೈಸೂರಿನ ನಿರಂತರ ರಂಗ ತಂಡ ಪ್ರಸ್ತುತ ಪಡಿಸುವ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರು ರಚಿಸಿರುವ ‘ಕೃಷ್ಣೇಗೌಡನ ಆನೆ’ ನಾಟಕ ಪ್ರದರ್ಶನವನ್ನು ದಿನಾಂಕ 07 ಆಗಸ್ಟ್ 2025ರಂದು ಬೆಳಗ್ಗೆ 11-30 ಗಂಟೆಗೆ ತಲಕಾಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಇವರ ಸಹಕಾರದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಶ್ರೀಯುತ ಸಾಧಿಕ್ ಪಾಷಾ ಇವರು ನಾಟಕಕ್ಕೆ ಚಾಲನೆ ನೀಡಲಿದ್ದು, ಜೀವನ್ ಕುಮಾರ್ ಬಿ. ಹೆಗ್ಗೋಡು ಇವರು ಈ ನಾಟಕದ ವಿನ್ಯಾಸ ಮತ್ತು ನಿರ್ದೇಶನ ಮಾಡಿರುತ್ತಾರೆ.