Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ಕಲಾ ಲೋಕದ ಅಧ್ಯಕ್ಷರಾಗಿ ರಮೇಶ ಎಂ. ಬಾಯಾರು

    February 23, 2026

    ರಂಗ ವಿಮರ್ಶೆ | ಎಳೆ ಪ್ರತಿಭೆಗಳಿಗೆ ಸಾಕ್ಷಿಯಾದ ರಂಗ ಪ್ರಯೋಗಗಳು

    February 23, 2026

    ಮಂಗಳೂರು ವಿ.ವಿ. ಕಾಲೇಜಿನಲ್ಲಿ ಹಿರಿಯ ಲೇಖಕಿ ರೋಹಿಣಿಗೆ ಅಭಿನಂದನೆ

    February 23, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುದ್ರೋಳಿ ಗಣೇಶ್ ಜಾದೂವಿಗೆ ಎರಡು ಅಂತರ್ ರಾಷ್ಟ್ರೀಯ ಮಟ್ಟದ ಪುರಸ್ಕಾರ
    Magic

    ಕುದ್ರೋಳಿ ಗಣೇಶ್ ಜಾದೂವಿಗೆ ಎರಡು ಅಂತರ್ ರಾಷ್ಟ್ರೀಯ ಮಟ್ಟದ ಪುರಸ್ಕಾರ

    January 24, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಥಾಯ್ ಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ ಜಾದೂಗಾರ ಕುದ್ರೋಳಿ ಗಣೇಶ್ ಅವರು ಪ್ರಸುತ ಪಡಿಸಿದ ” ತುಳುನಾಡು ತುಡರ್ ಚೆಂಡು” ಜಾದೂವಿಗೆ ಎರಡು ಅಂತರ್ ರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.

    ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ರವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ
    ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬ್ರಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ “ಮರ್ಲಿನ್ ಮೆಡಲ್ ” ನೀಡಿ ಗೌರವಿಸಿದೆ.

    ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥಾಯ್ ಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ” ಮೋಸ್ಟ್ ಓರಿಜಿನಲ್ ಆಕ್ಟ್ ” ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

    ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ರವರು ಕುದ್ರೋಳಿ ಗಣೇಶ್ ರವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥಾಯ್ ಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು.

    ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು.

    ಬ್ಯಾಂಕಾಕ್ ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಸನಾತನ ನಾಟ್ಯಾಲಯ 40 ವರ್ಷದ ಸಂಭ್ರಮ ಉದ್ಘಾಟನೆ
    Next Article ಪುಣ್ಯಲಹರಿ‘ ಸಮೂಹ ಗೀತ ರೂಪಕ
    roovari

    Add Comment Cancel Reply


    Related Posts

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026

    ಹಿರಿಯ ಜಾದೂಗಾರ ಪ್ರೊ. ಮಾಧವ್ ಅಸ್ತಂಗತ

    February 13, 2026

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಎನ್.ಐ.ಟಿ.ಕೆ.ಯಲ್ಲಿ ‘ವಿರಾಸತ್’ ಸಂಗೀತ, ನೃತ್ಯ ಪ್ರದರ್ಶನ ಮತ್ತು ಕಾರ್ಯಾಗಾರ | ಫೆಬ್ರುವರಿ 4ರಿಂದ 8  

    February 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.