ಉಪ್ಪಿನಕುದ್ರು : ‘ಪ್ರತಿಭೆ ನಿಮ್ಮದು ವೇದಿಕೆ ನಮ್ಮದು’ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ನಿರಂತರ 111ನೇ ತಿಂಗಳ ಕಾರ್ಯಕ್ರಮವು ದಿನಾಂಕ 21 ಸೆಪ್ಟೆಂಬರ್ 2025ರಂದು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಅದ್ದೂರಿಯಾಗಿ ನಡೆಯಿತು.
ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ಸಭಾ ಕಾರ್ಯಕ್ರಮದಲ್ಲಿ ಸತೀಶ್ ನಾಯಕ್ ಗುಡ್ಡೆಯಂಗಡಿ, ರಾಧಾಕೃಷ್ಣ ಪ್ರಭು, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಗಿರೀಶ್ ನಾಗೇಶ್ ಪ್ರಭು, ಗಣೇಶ್ ಭಟ್, ಕೀರ್ತನಾ ಭಟ್, ಜಯಂತಿ ಗಣಪತಿ ಸೇರುಗಾರ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಮಂಗಳೂರಿನ ಕುಮಾರಿ ಪಂಚಮಿ ಭಟ್ ಇವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭು ನೇತೃತ್ವದಲ್ಲಿ ಪಂಚಮಿ ಭಟ್ ಇವರು ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಇವರು ವಂದಿಸಿದರು.